ಕೊಪ್ಪಳ; ಜನವರಿ 10ರಂದು ನೇರ ಸಂದರ್ಶನ
ಕೊಪ್ಪಳ, ಜನವರಿ 09: ಕೊಪ್ಪಳದಲ್ಲಿ ಜನವರಿ 10ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ ಮತ್ತು ಯುವತಿಯರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕೊಪ್ಪಳ ನಗರದ ಭೂಮಿ ಐಎಎಸ್ ಮತ್ತು ಕೆಎಎಸ್ ಸ್ಟಡಿ ಸರ್ಕಲ್ ಜನವರಿ 10ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದ್ದಾರೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದ್ದಾರೆ.

ಅಶೋಕ ಸರ್ಕಲ್ ಹತ್ತಿರವಿರುವ ಲಯನ್ಸ್ ಆಸ್ಪತ್ರೆ ಕಾಂಪ್ಲೆಕ್ಸ್‌ನ ಭೂಮಿ ಸ್ಟಡಿ ಸರ್ಕಲ್ ಕಛೇರಿಯಲ್ಲಿ ವಾಕ್ ಇನ್ ಸಂದರ್ಶನ ನಡೆಯಲಿದೆ. ನುರಿತ ಉಪನ್ಯಾಸಕ/ ಉಪನ್ಯಾಸಕಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರಲ್ಲಿ ಭಾಗವಹಿಸಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವವರು ಬಿ.ಎ.-ಬಿಎಡ್ ಅಥವಾ ಎಂ.ಎ.-ಬಿಎಡ್, ಬಿ.ಎಸ್‌ಸಿ.-ಬಿಎಡ್(ಕೆಮಿಸ್ಟ್ರಿ) ಅಥವಾ ಎಂ.ಎಸ್‌ಸಿ.-ಬಿಎಡ್(ಕೆಮಿಸ್ಟ್ರಿ), ಬಿ.ಎಸ್‌ಸಿ.-ಬಿಎಡ್(ಫಿಜಿಕ್ಸ್) ಅಥವಾ ಎಂ.ಎಸ್‌ಸಿ.-ಬಿಎಡ್(ಫಿಜಿಕ್ಸ್) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 1 ರಿಂದ 2 ವರ್ಷಗಳ ಸೇವಾನುಭವ ಅಗತ್ಯ. ವಯೋಮಿತಿ 21 ರಿಂದ 30 ವರ್ಷಗಳು.
ಆಸಕ್ತ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ ಪ್ರತಿಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೇಟಾ ಹಾಗೂ ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಕಛೇರಿಯನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8105693234.
ವಿವಿಧ ತರಬೇತಿಗೆ ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಂದ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವವರಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಟಿವಿ ಟೆಕ್ನಿಷಿಯನ್, ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಆಪರೇಟರ್ ತರಬೇತಿಗಳನ್ನು ನೀಡಲಾಗುತ್ತದೆ.
ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 17 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ 8217236973, 9483485489, 9482188780 ಸಂಖ್ಯೆಗೆ ಸಂಪರ್ಕಿಸಬಹುದು.











Click it and Unblock the Notifications