ಕೊಪ್ಪಳದಲ್ಲಿ ಜುಲೈ 15ರಂದು ನೇರ ಸಂದರ್ಶನ
ಕೊಪ್ಪಳ, ಜುಲೈ 13; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 15ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 20 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30ರ ತನಕ ಪಾಲ್ಗೊಳ್ಳಬಹುದಾಗಿದೆ.
ನೇರ ಸಂದರ್ಶನದಲ್ಲಿ ಚಿತ್ರದುರ್ಗದ ಸೇವಾ ದೃಷ್ಟಿ ಪ್ರೈವೇಟ್ ಲಿಮಿಟೆಡ್, ಕೊಪ್ಪಳದ ಭಾರತ್ ಫೈನಾನ್ಸ್ ಪ್ರೈ. ಲಿ. ಮತ್ತು ಹುಬ್ಬಳ್ಳಿಯ ನವಭಾರತ ಫರ್ಟಿಲೈಸರ್ಸ್ ಭಾಗವಹಿಸುತ್ತಿದ್ದಾರೆ.

ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ 20 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಸೂಚನೆ ನೀಡಲಾಗಿದೆ.
ಆಸಕ್ತ ಮತ್ತು ಅರ್ಹರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇಲ್ಲಿಗೆ ಭೇಟಿ ನೀಡಬಹುದು.
ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7676707723, 6364098202, 9154708832ಕ್ಕೆ ಕರೆ ಮಾಡಬಹುದು ಅಥವ 08539-220859 ಸಂಖ್ಯೆಗೆ ಸಂಪರ್ಕಿಸಬಹುದು.
ಅತಿಥಿ ಶಿಕ್ಷಕರ ಹುದ್ದೆ; ಕಲಬುರಗಿ ಜಗತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ ಖಾಲಿಯಿರುವ ಕನ್ನಡ ಹಾಗೂ ಇಂಗ್ಲೀಷ ಭಾಷೆಗಳ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬಿಎ ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಟಿ.ಇ.ಟಿ. ಪಾಸಾದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 10,000 ರೂ. ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಜೊತೆಗೆ ಖುದ್ದಾಗಿ ಜುಲೈ 18ರೊಳಗಾಗಿ ಸದರಿ ಶಾಲೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9591888717, 9945434428 ಸಂಖ್ಯಗೆ ಸಂಪರ್ಕಿಸಬಹುದಾಗಿದೆ.












Click it and Unblock the Notifications