ಕೊಪ್ಪಳ: ಮಾರ್ಚ್ 24ರಂದು ನೇರ ಸಂದರ್ಶನ, ಅಭ್ಯರ್ಥಿಗಳಿಗೆ ಸೂಚನೆಗಳು
ಕೊಪ್ಪಳ, ಮಾರ್ಚ್ 23: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಮಾರ್ಚ್ 24ರ ಸೋಮವಾರ ಕೊಪ್ಪಳದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಖಾಸಗಿ ಕಂಪನಿಗಳು ಪಾಲ್ಗೊಳ್ಳಲಿದ್ದು, 18 ರಿಂದ 29 ವರ್ಷ ವಯೋಮಿತಿಯ ಪಿಯುಸಿ ಅಥವಾ ತತ್ಸಮಾನ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಮಾರ್ಚ್ 24ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.

ವಿವಿಧ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ತಮ್ಮಲ್ಲಿನ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನಕ್ಕೆ ಎಲ್ಲರಿಗೂ ಉಚಿತ ಪ್ರವೇಶವಿದೆ.
ನೇರ ಸಂದರ್ಶನದಲ್ಲಿ 18 ರಿಂದ 29 ವಯೋಮಿತಿಯ ಪಿಯುಸಿ ಅಥವಾ ತತ್ಸಮಾನ, ಯಾವುದೇ ಪದವಿ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಅರ್ಹ, ಆಸಕ್ತ ವಿದ್ಯಾರ್ಹತೆ ಹೊಂದಿದ ಯುವಕ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಸೆಟ್ ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಮತ್ತು ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.
ಆಸಕ್ತ ಮತ್ತು ಅರ್ಹರು ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗದ ನೆರವು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ.
ಜೆಸಿಬಿ ಚಾಲನಾ ತರಬೇತಿಗೆ ಅರ್ಜಿ ಹಾಕಿ: ಉತ್ತರ ಕನ್ನಡದ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ನಿರುದ್ಯೋಗ ಯುವಕರಿಗೆ ಜೆಸಿಬಿ ಹಾಗೂ ಲಘು ಮೋಟಾರು ವಾಹನ ಚಾಲನೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಮಾರ್ಚ್ 28ರ ತನಕ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಜೆಸಿಬಿ ಹಾಗೂ ಮೇ ತಿಂಗಳಲ್ಲಿ ಲಘು ಮೋಟಾರು ವಾಹನ ಚಾಲನೆ ತರಬೇತಿಗಳನ್ನು ಉಚಿತವಾಗಿ ನಡೆಸಲಾಗುತ್ತದೆ.
ಈ ತರಬೇತಿ ಪಡೆದ ಯುವಕರು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಬೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ ನೋಂದಾಯಿಸಲು ಮಾರ್ಚ್ 28 ಕೊನೆಯ ದಿನಾಂಕವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಿ. ಕರೆ ಮಾಡಲು ದೂರವಾಣಿ ಸಂಖ್ಯೆ 9482188780.












Click it and Unblock the Notifications