ಮೇ 26ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ
ಕೊಪ್ಪಳ, ಮೇ 25; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮೇ 26ರ ಶುಕ್ರವಾರ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರು ಈ ವಾಕ್ ಇನ್ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.30 ರವರೆಗೆ ವಾಕ್ ಇನ್ ಸಂದರ್ಶನ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಈ ವಾಕ್ ಇನ್ ಇಂಟರ್‌ವ್ಯೂನಲ್ಲಿ ಜಿಯೋ ಮತ್ತು ಎಂ.ಎನ್.ಸಿ ಕಂಪನಿ (ಸೇಂಟ್ ಗೋಬಿನ್) ಬೆಂಗಳೂರು ಇವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಪಿಯುಸಿ, ಐ.ಟಿ.ಐ. (ಆಲ್ ಟ್ರೇಡ್) ಹಾಗೂ ಡಿಪ್ಲೋಮಾ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವಾಕ್ ಇನ್ ಸಂದರ್ಶನದಲ್ಲಿ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಯುವಕ ಮತ್ತು ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ, ಉದ್ಯೋಗದ ನೆರವು ಪಡೆಯಬಹುದಾಗಿದೆ.
ಆಸಕ್ತರುಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859, 8431525339.

ತರಬೇತಿಗೆ ಅರ್ಜಿ ಆಹ್ವಾನ; ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಮೊಬೈಲ್ ರಿಪೇರಿ, ವಿದ್ಯುತ್ ಮೋಟರ್ ರೀವೈಂಡಿಂಗ್ & ರಿಪೇರಿ ತರಬೇತಿ ಹಾಗೂ ಸಾಫ್ಟ್ ಟಾಯ್ಸ್ (ಮೃಧು ಆಟಿಕೆ) ತಯಾರಿಕಾ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷದ ಒಳಗಿನವರಾಗಿರಬೇಕು.
ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಮಾಡಲು ವಿಳಾಸ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ. ದೂರವಾಣಿ ಸಂಖ್ಯೆ 08539-231038.
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಕುರಿಸಾಕಾಣಿಕೆ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಉಚಿತವಾಗಿ ನೀಡಲಾಗುವುದು. ತರಬೇತಿಗಾಗಿ ಜೂನ್ 5ರಂದು ಸಂದರ್ಶನ ನಡೆಯಲಿದ್ದು, ಜೂನ್ 6 ರಿಂದ ತರಬೇತಿ ಪ್ರಾರಂಭವಾಗಲಿವೆ.












Click it and Unblock the Notifications