ಕೊಪ್ಪಳದಲ್ಲಿ ನವೆಂಬರ್ 29ರಂದು ನೇರ ಸಂದರ್ಶನ
ಕೊಪ್ಪಳ, ನವೆಂಬರ್ 27; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನವೆಂಬರ್ 29ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ನವೆಂಬರ್ 29ರ ಮಂಗಳವಾರ ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಕನೆಕ್ಟ್ ಸಂಸ್ಥೆ ಧಾರವಾಡ ಎನ್.ಟಿ.ಟಿ.ಎಫ್ (ನೀಮ್ ಸ್ಕೀಮ್) ಟೋಯಟಾ ಕಿರ್ಲೋಸ್ಕರ್ ಮೋಟರ್ಸ್ ಪ್ರೈ.ಲಿ ಬೆಂಗಳೂರು ಬಿಡದಿ ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲಿದ್ದಾರೆ.

ಐಟಿಐ, ಪಿಯುಸಿ ಸೈನ್ಸ್ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 18 ರಿಂದ 24 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859, 9880750997.
ನವೆಂಬರ್ 30ಕ್ಕೆ ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯ ಪಶು ವಿಜ್ಞಾನ ವಿಭಾಗದಲ್ಲಿ 2 ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಪಶು ವಿಜ್ಞಾನ, ಪಶು ವೈದ್ಯಕೀಯ ವಿಜ್ಞಾನ ವಿಷಯಗಳಲ್ಲಿ ಎಂಎಸ್ಸಿ, ಪಿಹೆಚ್‌ಡಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ದಿನಾಂಕ 30 ನವೆಂಬರ್ 2022 ರಂದು ಬೆಳಗ್ಗೆ 11 ಗಂಟೆಗೆ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೃವಿವಿ ಜಾಲತಾಣ www.uasd.edu ಭೇಟಿ ನೀಡಬಹುದು.











Click it and Unblock the Notifications