ನವೆಂಬರ್ 8ರಂದು ಫ್ಲಿಪ್‌ಕಾರ್ಟ್‌ನಿಂದ ವಾಕ್ ಇನ್ ಸಂದರ್ಶನ

ಕೊಪ್ಪಳ, ನವೆಂಬರ್ 06; ಫ್ಲಿಪ್‌ಕಾರ್ಟ್ ಪ್ರೈ.ಲಿ. ನವೆಂಬರ್ 8ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದ್ದಾರೆ. 18 ರಿಂದ 35 ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10.30ಕ್ಕೆ ವಾಕ್ ಇನ್ ಸಂದರ್ಶನ ಆರಂಭವಾಗಲಿದೆ. ಬೆಂಗಳೂರಿನ ಫ್ಲಿಪ್‌ಕಾರ್ಟ್ ಪ್ರೈ.ಲಿ. ಸಂಸ್ಥೆಯವರು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಿದ್ದಾರೆ.

Flipkart

ಮಧ್ಯಾಹ್ನ 3.30ರ ತನಕ ವಾಕ್ ಇನ್ ಸಂದರ್ಶನ ನಡೆಯಲಿದೆ. ಆಸಕ್ತರು ಅಗತ್ಯ ದಾಖಲೆಗಳ ಜೊತೆ ಹಾಜರಾಗಿ ಸದುಪಯೋಗ ಪಡೆಯಬೇಕು ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.

ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷಗಳು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್ ಪ್ರತಿ, ಬಯೋಡೆಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

jobs

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08539-220859, 9380189600, 9353515518.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯ ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣಶಾಸ್ತ್ರ ವಿಭಾಗದಲ್ಲಿರುವ ಖಾಲಿ ಇರುವ ತಲಾ 1 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ. ಆಸಕ್ತರು ನವೆಂಬರ್ 7ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 57,600 ರೂ. ವೇತನ ನಿಗದಿ ಮಾಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳು ಸಂಬಂಧಪಟ್ಟ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ, ಜಾನುವಾರು ಸಾಕಾಣಿಕಾ ಸಂಕೀರ್ಣ ಅಥವಾ ಇನ್ಯಾವುದೇ ಘಟಕಗಳಲ್ಲಿ ಪೂರ್ಣಕಾಲಿಕವಾಗಿ ಕಾರ್ಯನಿರ್ವಹಬೇಕು.

ಅಭ್ಯರ್ಥಿಗಳು ಭಾರತೀಯ ಪಶುವೈದ್ಯಕೀಯ ಪರಿಷತ್ತಿನಿಂದ ಮಾನ್ಯತೆ ಹೊಂದಿರುವ ಮಹಾವಿದ್ಯಾಲಯಗಳಿಂದ ಪಶುವೈದ್ಯಕೀಯ ಅಥವಾ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅಡಿಯಲ್ಲಿ ಬರುವ ಸಂಸ್ಥೆಗಳಿಂದ ಪದವಿಯನ್ನು ಪಡೆದಿರಬೇಕು.

ಆಸಕ್ತರು ನವೆಂಬರ್ 7ರಂದು ಬೆಳಗ್ಗೆ 11ಗಂಟೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ನಿಗದಿತ ನಮೂನೆಯಲ್ಲಿ ಸ್ವ-ವಿವರವನ್ನು ಭರ್ತಿ ಮಾಡಿ ದಾಖಲೆಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಸಂದರ್ಶನ ದಿನ ಬೆಳಗ್ಗೆ 10ಗಂಟೆಯೊಳಗಾಗಿ ಸ್ಥಳದಲ್ಲಿ ಹಾಜರಿದ್ದು, ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 08182-200872.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+