ಕೊಪ್ಪಳ; ಅಕ್ಟೋಬರ್ 31ರಂದು ವಾಕ್ ಇನ್ ಸಂದರ್ಶನ

ಕೊಪ್ಪಳ, ಅಕ್ಟೋಬರ್ 28; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ವಾಕ್‌ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 27 ವರ್ಷದೊಳಗಿನ ಯುವಕ/ ಯುವತಿಯರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅಕ್ಟೋಬರ್ 31ರ ಸೋಮವಾರ ಬೆಳಗ್ಗೆ 10.30 ರಿಂದ 3.30ರ ತನಕ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ನೇರ ಸಂದರ್ಶನದಲ್ಲಿ ಹೊಸಪೇಟೆಯ ಸೂರ್ಯೋದಯ ಸ್ಮಾಲ್ ಬ್ಯಾಂಕ್ ಭಾಗವಹಿಸಲಿದೆ. ಜಿಲ್ಲೆಯ ಆಸಕ್ತ ಪಿಯುಸಿ, ಐಟಿಐ, ಡಿಪ್ಲೊಮಾ ಯಾವುದೇ ಪದವಿ ಪೂರ್ಣಗೊಳಿಸಿದ ಯುವಕ/ ಯುವತಿಯರು ಈ ಸಂದರ್ಶನಕ್ಕೆ ಹಾಜರಾಗಬಹುದು.

Walk In Interview At Koppal On October 31st

ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ರೆಸ್ಯೂಮ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ಮೊಬೈಲ್ ಸಂಖ್ಯೆ 08539-220859,8660410237, 8971303578.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಹಾಕಿ; ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 12 ತಿಂಗಳ ಅಪ್ರೆಂಟಿಸ್ ತರಬೇತಿ ನೀಡುತ್ತಿದೆ. ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ. ಸ್ಟೈಫಂಡ್ ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಮೆರಿಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ, ಸುದ್ದಿ ಸಂಗ್ರಹ ಮತ್ತು ರಚನೆ ಕುರಿತಂತೆ ತರಬೇತಿ ನೀಡಲಾಗುವುದು. ಅರ್ಜಿ ಹಾಕುವವರು ಕರ್ನಾಟಕದ ಕಾನೂನಾತ್ಮಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಯೋಮಿತಿ 35 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಇಲಾಖೆಯಲ್ಲಿ ಈ ಹಿಂದೆ ತರಬೇತಿ ಪಡೆದವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಜಿಯ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರ, ಕಂಪ್ಯೂಟರ್ ಜ್ಞಾನ ಹೊಂದಿರುವ ಕುರಿತ ಪೂರಕ ದಾಖಲೆಗಳನ್ನು ಲಗತ್ತಿಸಬೇಕು.

ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದೇವರಾಜ ಅರಸ್ ಕಾಲೋನಿ, ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ 08192-254892 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+