ಕೊಪ್ಪಳ: ಸೆಪ್ಟೆಂಬರ್13ರಂದು ವಾಕ್ ಇನ್ ಸಂದರ್ಶನ, ವಿವರ

ಕೊಪ್ಪಳ, ಸೆಪ್ಟೆಂಬರ್ 11: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಾಕ್ ಇನ್ ಸಂದರ್ಶನವನ್ನು ಸೆಪ್ಟೆಂಬರ್ 13ರಂದು ಆಯೋಜನೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 32 ವರ್ಷದ ವಯೋಮಿತಿಯಲ್ಲಿರಬೇಕು. ಯುವಕ ಮತ್ತು ಯುವತಿಯರು, ನಿರುದ್ಯೋಗಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಹಾಜರಾಗಬೇಕು ಎಂದು ಮಾಹಿತಿ ನೀಡಲಾಗಿದೆ.

ವಾಕ್ ಇನ್ ಸಂದರ್ಶನ ಸೆಪ್ಟೆಂಬರ್ 13ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಛೇರಿಯಲ್ಲಿ ನಡೆಯಲಿದೆ.

Walk In Interview At Koppal On September 13

ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಈ ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಇತರೆ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್‌ನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು.

ಸ್ವಯಂ ಉದ್ಯೋಗ ತರಬೇತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕಟ್ಟಡ ಕೆಲಸ ಮತ್ತು ಗಾರೆ ಕೆಲಸ ತರಬೇತಿ ಹಾಗೂ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಆಸಕ್ತರು ತಮ್ಮ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ 3 ಫೋಟೋ, ಅಂಕಪಟ್ಟಿ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.

ಸ್ವಯಂ ಉದ್ಯೋಗ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ. ಕಟ್ಟಡ ಕೆಲಸ ಮತ್ತು ಗಾರೆ ಕೆಲಸ ತರಬೇತಿಗಾಗಿ ಸೆಪ್ಟೆಂಬರ್ 17 ರಂದು ಸಂದರ್ಶನ ನಡೆಯಲಿದ್ದು, ಸೆಪ್ಟೆಂಬರ್ 18 ರಿಂದ ತರಬೇತಿ ಪ್ರಾರಂಭವಾಗಲಿದೆ.

ಕಂಪ್ಯೂಟರ್ ಡಿಟಿಪಿ ತರಬೇತಿಗಾಗಿ ಸೆಪ್ಟೆಂಬರ್ 23 ರಂದು ಸಂದರ್ಶನ ನಡೆಯಲಿದ್ದು, ಸೆಪ್ಟೆಂಬರ್ 24ರಂದು ತರಬೇತಿ ಪ್ರಾರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-231038, ಮೊಬೈಲ್ ಸಂಖ್ಯೆ 9483618178, 7259073827.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+