Get Updates
Get notified of breaking news, exclusive insights, and must-see stories!

ಮಂಗಳೂರು; ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

ಮಂಗಳೂರು, ಫೆಬ್ರವರಿ 03; ಮಂಗಳೂರು ವಿಶ್ವವಿದ್ಯಾನಿಯಲ ಅತಿಥಿ ಉಪನ್ಯಾಸಕರ ಹುದ್ದೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ಫೆಬ್ರವರಿ 5ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಮಂಗಳಗಂಗೋತ್ರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಆಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿರುವ ಸ್ನಾತಕೋತ್ತರ ಕೋರ್ಸ್‌ಗಳಿಗೆ ನೇಮಕಾತಿ ನಡೆಯುತ್ತಿದೆ.

ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು/ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ವಿಶ್ವವಿದ್ಯಾನಿಲಯದ ಪ್ರಥಮ ದರ್ಜೆ ಕಾಲೇಜು, ಮಂಗಳ ಗಂಗೋತ್ರಿ/ ವಿಶ್ವವಿದ್ಯಾನಿಯಲಯ ಕಾಲೇಜು, ನೆಲ್ಯಾಡಿ/ ವಿಶ್ವವಿದ್ಯಾನಿಲಯ ಕಾಲೇಜು, ಬನ್ನಡ್ಕ, ಮೂಡಬಿದಿರೆ ಇಲ್ಲಿಯ ಪದವಿ ಕೋರ್ಸ್‌ಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ.

Walk In Interview At Mangalore University For Guest Lecturer Post

2021-22ನೇ ಸಾಲಿಗೆ ವಿವಿಧ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ. ಆಸಕ್ತ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ 55ರಷ್ಟು ಅಂಕಗಳೊಂದಿಗೆ ಉತ್ತಿರ್ಣರಾಗಿರಬೇಕು. (ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನಿಷ್ಠ 50 ಅಂಕಗಳು).

ಅರ್ಹ ಅಭ್ಯರ್ಥಿಗಳು www.mangaloreuniversity.ac.in ವೆಬ್ ಸೈಟ್‌ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಎಸ್‌ಎಸ್‌ಎಲ್‌ಸಿ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ. ಅನುಭವ ಪ್ರಮಾಣ ಪತ್ರ, ಯುಜಿಸಿ, ಎನ್‌ಇಟಿ/ ಎಸ್‌ಎಲ್‌ಐಟಿ ಮುಂತಾದ ಪ್ರಮಾಣ ಪತ್ರಗಳ ಮೂಲ ದಾಖಲಾತಿಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ನೇರ ಸಂದರ್ಶನ ನಡೆಯುವ ಸ್ಥಳ; ಕುಲಸಚಿವರ ಕಚೇರಿ, ಆಡಳಿತ ಸೌಧ, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ 574199.

ಯುಜಿಸಿ, ಎನ್‌ಇಟಿ, ಎಸ್‌ಎಲ್‌ಇಟಿ, ಉತ್ತೀರ್ಣತೆ/ ಎಂ.ಫಿಲ್/ ಪಿಎಚ್‌ಡಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುತ್ತದೆ. ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಕರ್ನಾಟಕ ಮೀಸಲಾತಿ ಆದೇಶದನುಸಾರ ಎಸ್‌ಸಿ ಶೇ 15, ಎಸ್‌ಸಿ ಶೇ 3, ಒಬಿಸಿ ಶೇ 32, ಜಿಎಂ ಶೇ 50ರಂತೆ ಮಾಡಲಾಗುತ್ತದೆ.

ಯಾವ, ಯಾವ ವಿಷಯಗಳು; ಫೆಬ್ರವರಿ 5ರ ಬೆಳಗ್ಗೆ 9 ಗಂಟೆಗೆ ಕೆಮಿಸ್ಟ್ರಿ 2 ಹುದ್ದೆಗಳು, ಅಪ್ಲೈಡ್ ಝವಾಲಜಿ1 , ಗಣಿತ 4, ಕಂಪ್ಯೂಟರ್ ಸೈನ್ಸ್ 6 ವಿಷಯಗಳಿಗೆ ನೇರ ಸಂದರ್ಶನ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ yogic science 2, ಸ್ಟಾಟಿಟಿಕ್ಸ್ 1, ಫಿಸಿಕ್ಸ್ 1 ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ.

ಕಾನೂನು ಸಲಹೆಗಾರರ ಹುದ್ದೆ; ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೃಜಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸುವವರು ನಿವೃತ್ತಿ ಹೊಂದಿರುವ ಜಿಲ್ಲಾ ಸಿವಿಲ್ ನ್ಯಾಯಾಧೀಶರಾಗಿರಬೇಕು. ನಿವೃತ್ತಿ ಹೊಂದಿರುವ ಸಿವಿಲ್ ನ್ಯಾಯಾಧೀಶರು ನೇರವಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2022ರ ಫೆಬ್ರವರಿ 15ರ ಮಧ್ಯಾಹ್ನ 3 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಉದ್ಯಮ ಶೀಲತಾ ತರಬೇತಿ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಗಳ ಪ್ರಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಕಲಬುರಗಿ ಜಿಲ್ಲೆಯ ಪುರುಷ ಮತ್ತು ಮಹಿಳೆಯರಿಗೆ ಫೆಬ್ರವರಿ ತಿಂಗಳಿನಲ್ಲಿ ಕಲಬುರಗಿಯಲ್ಲಿ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು ಮತ್ತು ಮತ್ತಿತರ ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ.

ಆಸಕ್ತಿಯುಳ್ಳವರಿಗೆ ವಯೋಮಿತಿ 18 ರಿಂದ 40 ವರ್ಷಗಳು. ಕಲಬುರಗಿ ಜಿಲ್ಲೆಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9916006910, 8618797704ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+