ಮಾರ್ಚ್ 14ರಂದು ಬಳ್ಳಾರಿ, ಶಿವಮೊಗ್ಗದಲ್ಲಿ ನೇರ ಸಂದರ್ಶನ
ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 14ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಖಾಸಗಿ ಕಂಪನಿಗಳು ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.
ಬೆಂಗಳೂರು, ಮಾರ್ಚ್ 12; ಉದ್ಯೋಗ ಹುಡುಕುತ್ತಿರುವ ಯುವಕ, ಯುವತಿಯರಿಗೆ ಸಿಹಿಸುದ್ದಿ. ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 14ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ವಿವಿಧ ಖಾಸಗಿ ಕಂಪನಿಗಳು ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಳ್ಳಾರಿ ನಗರದ ಡೊಮಿನೋಸ್ ಪಿಜ್ಜಾ ಕಂಪನಿಯಲ್ಲಿ ಖಾಲಿ ಇರುವ ಡೆಲಿವರಿ ಬಾಯ್ಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪಾರ್ವತಿ ನಗರದ ಏರ್‌ಟೆಲ್ ಆಫೀಸ್ ಹತ್ತಿರದ ಜೈ ಶ್ರೀರಾಮ್ ಬಿಲ್ಡಿಂಗ್‍ನಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವಾಹನದ ವ್ಯವಸ್ಥೆಯನ್ನು ಕಂಪನಿಯವರೇ ನೀಡುತ್ತಾರೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿಯೊಂದಿಗೆ ತಪ್ಪದೇ ತರಬೇಕು. ಡೆಲಿವರಿ ಬಾಯ್ಸ್ ಹುದ್ದೆಗಳು 30 ಇದ್ದು, ಅಭ್ಯರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ದ್ವಿ-ಚಕ್ರ ವಾಹನ, ಲೈಸೆನ್ಸ್, ಸ್ಮಾರ್ಟ್‍ಫೋನ್ ಕಡ್ಡಾಯವಾಗಿ ಹೊಂದಿರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡೊಮಿನೋಸ್ ಪಿಜ್ಜಾ ಕಂಪನಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 9980346209, 9035869337, 9019692898, 7892971984.
ಶಿವಮೊಗ್ಗದಲ್ಲಿ ನೇರ ಸಂದರ್ಶನ; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 14ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ನೇರ ಸಂದರ್ಶನದಲ್ಲಿ ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನಕ್ಕೆ ಉಚಿತ ಪ್ರವೇಶ ಇರುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರನ್ನು ಖುದ್ದಾಗಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606 ಮತ್ತು 9482023412, 9535312531.












Click it and Unblock the Notifications