ಡಿಸೆಂಬರ್ 21ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ
ಕಲಬುರಗಿ, ಡಿಸೆಂಬರ್ 16; ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಮೂರು ವೈದ್ಯರ ಹುದ್ದೆಗಳು ಮಂಜೂರಾಗಿವೆ. ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರ ನೇಮಕ ಮಾಡಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ಕೇಂದ್ರ ಕಾರಾಗೃಹ, ಶಿವಮೊಗ್ಗ ಇಲ್ಲಿ ಒಂದು ವರ್ಷದ ಅವಧಿಗೆ ವೈದ್ಯರ ನೇಮಕ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಡಿಸೆಂಬರ್ 21ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಬೆಳಗ್ಗೆ 11ರಿಂದ ಮಧ್ಯಾಹ್ನ 1.30 ರವರೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ನೇರ ಸಂದರ್ಶನವಿದ್ದು, ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳು ಮತ್ತು ಅವುಗಳ ದೃಢೀಕೃತ ನಕಲುಗಳ ಒಂದು ಪ್ರತಿ, ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08182-222382.
ನೇರ ಸಂದರ್ಶನ; ಜಿಲ್ಲಾ ಎನ್. ಸಿ. ಡಿ. ಘಟಕವು ಎನ್. ಪಿ. ಸಿ. ಡಿ. ಸಿ. ಎಸ್. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರನ್ನು ನೇಮಕಾತಿ ಮಾಡಿಕೊಳ್ಳಲು ಡಿಸೆಂಬರ್ 21ರಂದು ನೇರ ಸಂದರ್ಶನ ನಡೆಯಲಿದೆ.
ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
1 ವರ್ಷ ಆರೋಗ್ಯ ಸೇವೆ/ ಪಬ್ಲಿಕ್ ಹೆಲ್ತ್ ಪ್ರೋಗ್ರಾಂನಲ್ಲಿ ಎನ್. ಸಿ. ಡಿ. ಕುರಿತು ಕಾರ್ಯನಿರ್ವಹಿಸಿದ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವ ಎಂ. ಬಿ. ಬಿ. ಎಸ್. ಅಥವಾ ಬಿ. ಎ. ಎಂ. ಎಸ್/ ಬಿ. ಡಿ. ಎಸ್. ದೊಂದಿಗೆ ಎಂ. ಪಿ. ಹೆಚ್ ವಿದ್ಯಾರ್ಹತೆಯುಳ್ಳ 60 ವರ್ಷ ವಯೋಮಿತಿಯೊಳಗಿನವರು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 42000 ರೂ.ಗಳು.
ಆಸಕ್ತರು ಈ ನೇರ ಸಂದರ್ಶನದಲ್ಲಿ ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ಎನ್. ಸಿ. ಡಿ. ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕರೆ ಮಾಡಿ 08182-220685.











Click it and Unblock the Notifications