ಶಿವಮೊಗ್ಗ; ನವೆಂಬರ್ 24ರಂದು ನೇರ ಸಂದರ್ಶನ
ಶಿವಮೊಗ್ಗ, ನವೆಂಬರ್ 22; ಶಿವಮೊಗ್ಗದಲ್ಲಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ್ ಅಭ್ಯರ್ಥಿಗಳು ನವೆಂಬರ್ 24ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ 8 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆ ಮತ್ತು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ 1 ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲಾಗುತ್ತಿದೆ. ಅರ್ಹ ಎಂಬಿಬಿಎಸ್ ಪದವೀಧರ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನವೆಂಬರ್ 24ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ. ಹೆಚ್. ರಸ್ತೆ, ಶಿವಮೊಗ್ಗ ಮತ್ತು ಉಪವಿಭಾಗಿಯ ಆಸ್ಪತ್ರೆ, ಸಾಗರ ಇಲ್ಲಿಗೆ ಹಾಜರಾಗಬಹುದು.
ನೇರ ಸಂದರ್ಶನಕ್ಕೆ ಬರುವಾಗ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಒಂದು ಸೆಟ್ ನಕಲು ಮತ್ತು ಮೂಲಕ ಪ್ರತಿಗಳು ಹಾಗೂ ಇತ್ತೀಚಿನ ಒಂದು ಭಾವಚಿತ್ರದೊಂದಿಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222382.
ತರಬೇತಿಗೆ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯುಪಿಎಸ್‍ಸಿ (UPSC) ನಾಗರೀಕ ಸೇವೆ ಹಾಗೂ ಬ್ಯಾಂಕಿಂಗ್ ಪಿ.ಓ. (BANKING P.O) ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಗಳ ಪ್ರವರ್ಗ -1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆ ಮಾಡುವ ವಿದ್ಯಾರ್ಥಿಗಳು ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು, ಹಿಂದುಳಿದ ವರ್ಗಗಗಳ ಪ್ರವರ್ಗ -1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಯ ರೂ. 5ಲಕ್ಷಗಳ ಮಿತಿಯಲ್ಲಿರಬೇಕು.
ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು.
ಆಸಕ್ತರು https://bcwd.karnataka.gov.in ಮೂಲಕ ದಿನಾಂಕ 4/12/2023ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ 8050770004 ಸಂಖ್ಯೆಗೆ ಕರೆ ಮಾಡಬಹುದು.












Click it and Unblock the Notifications