ಶಿವಮೊಗ್ಗದಲ್ಲಿ ಫೆಬ್ರವರಿ 8ರಂದು ನೇರ ಸಂದರ್ಶನ

ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 8ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಶಿವಮೊಗ್ಗ, ಫೆಬ್ರವರಿ 05; ಸಹಾಯಕ ಪ್ರಾಧ್ಯಾಪಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಕುರಿತು ಫೆಬ್ರವರಿ 8ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ರೋಗಶಾಸ್ತ್ರ, ಪಶುವೈದ್ಯಕೀಯ ಔಷಧ ಹಾಗೂ ವಿಷ ಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ ವಿಭಾಗ, ಪ್ರಾಣಿ ಅನುವಂಶೀಯತೆ ಮತ್ತು ತಳಿ ಶಾಸ್ತ್ರ ವಿಭಾಗದಲ್ಲಿ ಹುದ್ದೆಗಳು ಖಾಲಿ ಇವೆ.

Walk In Interview At Shivamogga Veterinary College On February 8th

ಪಶು ವೈದ್ಯಕೀಯ ಚಿಕಿತ್ಸಾ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸೂಕ್ಷ್ಮ ಜೀವಾಣು ಶಾಸ್ತ್ರ, ವಿಭಾಗ, ದೈಹಿಕ ಶಿಕ್ಷಣ ಮತ್ತು ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣದ ಪಶು ವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಪಶು ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ ಸೂಕ್ಷ್ಮಜೀವಾಣು ಶಾಸ್ತ್ರ/ ಪರೋಪಜೀವಿ ಶಾಸ್ತ್ರ,/ ಜೀವರಸಾಯನ ಶಾಸ್ತ್ರ ವಿಭಾಗಗಳಲ್ಲಿ ನೇಮಕ ನಡೆಯುತ್ತಿದೆ.

ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‍ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ 57,600 ರೂ. ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ 50,000 ರೂ. ಮಾಸಿಕ ವೇತನವಾಗಿ ಪಾವತಿ ಮಾಡಲಾಗುತ್ತದೆ.

ಫೆಬ್ರವರಿ 8ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶು ವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ವೆಬ್‌ಸೈಟ್‌ ನೋಡಬಹುದು ಅಥವ 08182-200872 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ವಿಸ್ತರಣೆ; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ-1 ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಕಲ್ಪಿಸಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿತ್ತು.

ಆಸಕ್ತರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 11ರವರೆಗೆ ವಿಸ್ತರಿಲಾಗಿದೆ. ಅರ್ಜಿ ಸಲ್ಲಿಸಲು ವೆಬ್‍ಸೈಟ್ https://shp.karnataka.gov.in ಮತ್ತು https://bcwd.karantaka.gov.in ಬಳಕೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 8050770006/ 28182-222129/ 080-35254757.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+