ತುಮಕೂರು; ಆಗಸ್ಟ್ 24ರಂದು ನೇರ ಸಂದರ್ಶನ
ತುಮಕೂರು, ಆಗಸ್ಟ್ 23: ಜಿಲ್ಲಾ ಆಸ್ಪತ್ರೆ ತುಮಕೂರು ಟ್ರಾಮಾ ಕೇರ್ ಸೆಂಟರ್‌ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹರು ಆಗಸ್ಟ್ 24ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ ತುಮಕೂರು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, 3 ಪೋಟೋ ಮತ್ತು ಮೂಲ ದಾಖಲಾತಿಗಳ ಒಂದು ಸೆಟ್ ಜೆರಾಕ್ಸ್ ದೃಢೀಕೃತ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಸಭಾಂಗಣದಲ್ಲಿ ನೇರ ಸಂದರ್ಶನ ಗುರುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ. ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳ ಜೊತೆ ಹಾಜರಾಗಬೇಕು ಎಂದು ಪ್ರಕಟಣೆ ಹೇಳಿದೆ.
ಯಾವ, ಯಾವ ಹುದ್ದೆಗಳು
* ಸ್ಟಾಫ್ ನರ್ಸ್, 29 ಹುದ್ದೆಗಳು. ಬಿಎಸ್‌ಸಿ/ ಜಿಎನ್‌ಎಂ ಉತ್ತೀರ್ಣಗೊಂಡ ಅಭ್ಯರ್ಥಿಗಳು ಹಾಜರಾಗಬಹುದು.
* ಟ್ರಾಮಾ ಕೋಆರ್ಡಿನೇಟರ್, 1 ಹುದ್ದೆ. ಶುಶ್ರೂಷಾಧೀಕ್ಷಕರು (ಗ್ರೇಡ್-1) ಹುದ್ದೆಯಲ್ಲಿ ಕೆಲಸ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು.
* ನರ್ಸಿಂಗ್ ಅಟೆಂಡೆಟ್, 12 ಹುದ್ದೆಗಳು. ಎಸ್‌ಎಸ್‌ಎಲ್‌ಸಿ/ ಪಿಯುಸಿ ಉತ್ತೀರ್ಣರಾಗಿರಬೇಕು.
* ಓಟಿ ಟೆಕ್ನಿಶಿಯನ್, 5 ಹುದ್ದೆಗಳು. ಡಿಒಟಿಟಿ ಕೋರ್ಸ್ ಉತ್ತೀರ್ಣರಾಗಿರಬೇಕು.
* ರೆಡಿಯೋಗ್ರಾಫರ್, 4 ಹುದ್ದೆಗಳು. ಡಿಎಂಐಟಿ ಕೋರ್ಸ್ ಉತ್ತೀರ್ಣರಾಗಿರಬೇಕು.
* ಲ್ಯಾಬ್ ಟೆಕ್ನಿಶಿಯನ್, 2 ಹುದ್ದೆಗಳು. ಡಿಎಂಎಲ್‌ಟಿ ಕೋರ್ಸ್ ಉತ್ತೀರ್ಣರಾಗಿರಬೇಕು.
* ಮಲ್ಟಿ ಟಾಸ್ಕ್ ವರ್ಕರ್, 15 ಹುದ್ದೆಗಳು. ಎಸ್‌ಎಸ್‌ಎಲ್‌ಸಿ/ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆಗಸ್ಟ್ 25ರಂದು ನೇರ ಸಂದರ್ಶನ; ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25ರಂದು ಬೆಳಗ್ಗೆ 10.30ಕ್ಕೆ ಉಡುಪಿ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೈ, ಲಿ. ಇಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 8105618291, 9945856670, 8105774936.












Click it and Unblock the Notifications