ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿಯಲ್ಲಿ ಆಗಸ್ಟ್ 26ರಂದು ನೇರ ಸಂದರ್ಶನ

|
Google Oneindia Kannada News

ಉಡುಪಿ, ಆಗಸ್ಟ್ 24; ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಗಸ್ಟ್ 26ರಂದು ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೆಸ್ಯೂಮ್, ಆಧಾರ್ ಕಾರ್ಡ್‌ನೊಂದಿಗೆ ಹಾಜರಾಗಬಹುದಾಗಿದೆ.

ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್‌ ಪ್ರೈ. ಲಿ, ಜನಸ್ನೇಹಿ ಪ್ರೈ. ಲಿ ಮತ್ತು ಶಾಲಿಮರ್ ಪ್ರಿಂರ್ಸ್ ಕಂಪನಿಗಳು ಆಗಸ್ಟ್ 26ರ ಬೆಳಗ್ಗೆ 10.30ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಿವೆ.

ಐಐಐಟಿ ಬೆಂಗಳೂರು ನೇಮಕಾತಿ 2022: ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿವೆಐಐಐಟಿ ಬೆಂಗಳೂರು ನೇಮಕಾತಿ 2022: ಸಿಸ್ಟಮ್ ಇಂಜಿನಿಯರ್ ಹುದ್ದೆಗಳಿವೆ

ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಳ್ಗೊಳ್ಳಬಹುದಾಗಿದೆ.

ಕೊಡಗಿನಲ್ಲಿ ನಿಷೇಧಾಜ್ಞೆ; ಆಗಸ್ಟ್ 25ರ ಉದ್ಯೋಗ ಮೇಳ ಮುಂದೂಡಿಕೆ ಕೊಡಗಿನಲ್ಲಿ ನಿಷೇಧಾಜ್ಞೆ; ಆಗಸ್ಟ್ 25ರ ಉದ್ಯೋಗ ಮೇಳ ಮುಂದೂಡಿಕೆ

Walk In Interview At Udupi District Employment Exchange Office On August 26

ಮೇಲ್ಕಂಡ ಎಲ್ಲಾ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಗ್ರಾಮ ಪಂಚಾಯಿತಿ ನೇರ ನೇಮಕಾತಿಗೆ ಸರ್ಕಾರದ ತಾತ್ಕಾಲಿಕ ತಡೆ ಗ್ರಾಮ ಪಂಚಾಯಿತಿ ನೇರ ನೇಮಕಾತಿಗೆ ಸರ್ಕಾರದ ತಾತ್ಕಾಲಿಕ ತಡೆ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಇವರನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8105618291, 8197440155, 9901472710ಗೆ ಕರೆ ಮಾಡಬಹುದಾಗಿದೆ.

ಬ್ಯಾಂಕಿಂಗ್ ಪರೀಕ್ಷೆ ತರಬೇತಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುತ್ತದೆ.

ಈ ತರಬೇತಿ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಆಗಸ್ಟ್ 29ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಸರು ನೋಂದಣಿ ಮಾಡಲು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಕರೆ ಮಾಡಬಹುದಾಗಿದೆ. ನೋಂದಣಿಗಾಗಿ ದೂರವಾಣಿ ಸಂಖ್ಯೆ 0821-2515944.

ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಮಡಿಕೇರಿ ತಾಲ್ಲೂಕಿನ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು.

ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 35 ವರ್ಷಗಳು. ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷದ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ www.anganwadirecruit.kar.nic.in. ಅಭ್ಯರ್ಥಿಗಳಿ ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದೆ. ಖುದ್ದಾಗಿ, ಅಂಚೆ ಮೂಲಕ ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08272-295087 ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಕರೆ ಮಾಡಬಹುದಾಗಿದೆ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಕುರುಳಿ, ಪದಕಲ್ಲು, ಐಕೂಳ-2ದಲ್ಲಿ ಖಾಲಿ ಇವೆ. ಅಂಗನವಾಡಿ ಸಹಾಯಕಿಯರ ಹುದ್ದೆಗಳು ಬಲ್ಲಮಾವಟಿ ಟೌನ್, ಕುಂಬಳಚೇರಿ, ಬಲ್ಲಮಾವಟಿ-1, ಚೇರಂಡೇಟಿ, ಗಾಳಿಬೀಡು-2, ಮುತ್ತಾರುಮುಡಿ, ಕುಂಬಳಗೇರಿ ಉಕ್ಕುಡ, ವಂಚಲು ಕಾಲೇಜು ಹಿಂಭಾಗ ಖಾಲಿ ಇದೆ.

ಸಾಲ ಸೌಲಭ್ಯಕ್ಕೆ ಅರ್ಜಿ ಹಾಕಿ; 2022-23ನೇ ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿ ಕೈಗಾರಿಕೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮುಖಾಂತರ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಯಡಿ 18 ವರ್ಷ ತುಂಬಿದ ಪಟ್ಟಣ/ ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08272-228431/ 228746.

English summary
Walk in interview in Udupi district employment exchange office on August 26th. Candidates can attend interview with aadhar card and resume.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X