ಉಡುಪಿ; ಆಗಸ್ಟ್ 5ರಂದು ನೇರ ಸಂದರ್ಶನ
ಉಡುಪಿ, ಜುಲೈ 31; ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಮನೋವೈದ್ಯರ ಹುದ್ದೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳ ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಲಾಗಿದೆ. ಗುತ್ತಿಗೆ ಆಧಾರದ ಮೇಲೆ ಮನೋವೈದ್ಯರ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಆಗಸ್ಟ್ 5ರಂದು ಬೆಳಗ್ಗೆ 10.30 ನೇರ ಸಂದರ್ಶನ ನಡೆಯಲಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಆಗಮಿಸಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಆಹ್ವಾನ; ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ ರಚಿಸಲಾಗುತ್ತಿದೆ.
ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ವ್ಯಾಪ್ತಿಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ, ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಆಗಸ್ಟ್ 2 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-220925.
ವೃತ್ತಿ ತರಬೇತಿ ಕಾರ್ಯಾಗಾರ; ಚಿತ್ರದುರ್ಗ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಚ್.ಸಿ.ಎಲ್. ಟೆಕ್ ಬೀ ಕಂಪನಿ ಸಹಯೋಗದೊಂದಿಗೆ ಆಗಸ್ಟ್ 1ರಂದು ಬೆಳಗ್ಗೆ 9.30ಕ್ಕೆ ಚಿತ್ರದುರ್ಗ ಕೋಟೆ ಮುಂಭಾಗದ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ತರಬೇತಿ ಕಾರ್ಯಗಾರ ಆಯೋಜನೆ ಮಾಡಲಾಗಿದೆ.
2021-22 ಹಾಗೂ 2022-23ನೇ ಸಾಲಿನಲ್ಲಿ ಪಿಯುಸಿ ಪಾಸಾದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ದ್ವಿತೀಯ ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋದೊಂದಿಗೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬಹುದು.
ಪರೀಕ್ಷೆ ನಡೆಸಿ ಆಯ್ಕೆಯಾದ ಅರ್ಹ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ನೀಡಿ ನಂತರ ಹೆಚ್.ಸಿ.ಎಲ್ ಕಂಪನಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಈ ಕಾರ್ಯಾಗಾರವು ಒಂದು ಉತ್ತಮವಾದ ಉದ್ದೇಶವನ್ನು ಹೊಂದಿದ್ದು, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8217478207, 8722790340, 9845454471 ಹಾಗೂ 9008591970 ಸಂಪರ್ಕಿಸಬಹುದು.












Click it and Unblock the Notifications