ಕೋಲಾರ; ಆಪ್ತ ಸಮಾಲೋಚಕರ ನೇಮಕಾತಿ ನೇರ ಸಂದರ್ಶನ

ಬೆಂಗಳೂರು, ಜುಲೈ 08 : ಕೋಲಾರ ಜಿಲ್ಲೆಯಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಆಪ್ತ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

2020-21ನೇ ಸಾಲಿಗೆ ಆಪ್ತ ಸಮಾಲೋಚಕರಾಗಿ ಕಾಲೇಜು, ಕಾರ್ಖಾನೆ ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಂದು ದಿನದ ಭೇಟಿಗೆ 1000 ರೂ.ರಂತೆ ತಿಂಗಳಿಗೆ 10 ಭೇಟಿಯಂತೆ ಗೌರವ ಧನ ನೀಡಲಾಗುವುದು.

ಸಂದರ್ಶನ ನಡೆಯುವ ಸ್ಥಳ : ಆಸಕ್ತಿಯುಳ್ಳ ಅಭ್ಯರ್ಥಿಗಳು ಜುಲೈ 14ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

Walk In Interview Consultant Jobs In Kolar

ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ಮೂಲ ದಾಖಲೆಗಳು ಮತ್ತು 1 ಸೆಟ್‍ ಝೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯೊಳಗಾಗಿ ಸಂದರ್ಶನ ನಡೆಯಲಿದೆ.

ಎಂ.ಎಸ್ಸಿ ಇನ್ ಸೈಕಾಲಜಿ ಪದವಿದರರಿಗೆ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಈ ಅಭ್ಯರ್ಥಿಗಳು ಬಾರದ ಪಕ್ಷದಲ್ಲಿ ಎಂ.ಎಸ್.ಡಬ್ಲ್ಯೂ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು ಎಂದು ಕೋಲಾರ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+