• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಎಸ್‌ಐಸಿ ಕರ್ನಾಟಕ; ಮೆಡಿಕಲ್ ರೆಫರಿ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ಬೆಂಗಳೂರು, ಜುಲೈ 12; ಕಾರ್ಮಿಕರ ರಾಜ್ಯ ವಿಮಾ ನಿಗಮ ಕರ್ನಾಟಕ ವಿವಿಧ ಸ್ಥಳಗಳಲ್ಲಿ ಇರುವ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ ಆಯೋಜನೆ ಮಾಡಿದೆ. ತಾತ್ಕಾಲಿಕವಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಬೆಂಗಳೂರು ನಗರ ಸೇರಿದಂತೆ ರಾಜ್ಯವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 14 Medical Referee ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು

ಜುಲೈ 30ರಂದು ಬೆಳಗ್ಗೆ 10 ರಿಂದ 11 ಗಂಟೆಯ ತನಕ ತಮ್ಮ ಹತ್ತಿರದ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನದಲ್ಲಿ ಪಾಲ್ಗೊಳ್ಳುವವರಿಗೆ 30/7/2021ಕ್ಕೆ ಅನ್ವಯವಾಗುವಂತೆ 64 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಚಿಕ್ಕಮಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಚಿಕ್ಕಮಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವವರು ಎಂಬಿಬಿಎಸ್ ಪದವಿಯನ್ನು ಪಡೆದಿರಬೇಕು. ನಿವೃತ್ತ ರಾಜ್ಯ/ ಕೇಂದ್ರ ಸರ್ಕಾರದ ವೈದ್ಯರುಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು ಗ್ರಾಮೀಣ ಕುಡಿಯುವ ನೀರು ಇಲಾಖೆ ನೇಮಕಾತಿ; ವಿವರಗಳು

ಖಾಲಿ ಇರುವ ಸ್ಥಳಗಳು; ಮಲ್ಲೇಶ್ವರ (ಬೆಂಗಳೂರು), ಬೊಮ್ಮಸಂದ್ರ (ಬೆಂಗಳೂರು), ಶಿವಮೊಗ್ಗ/ ಭದ್ರಾವತಿ, ಕಲಬುರಗಿ, ಮಂಗಳೂರು, ಬೆಳಗಾವಿ, ತುಮಕೂರು, ವಿಜಯಪುರ, ಮೈಸೂರು & ನಂಜನಗೂಡು, ಶಹಾಬಾದ್, ಕಾರವಾರ, ಹುಬ್ಬಳ್ಳಿ, ತೋರಣಗಲ್ಲು, ಹಾಸನ.

ಈ ನೇಮಕಾತಿಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಅವಧಿಯನ್ನು ಒಳಗೊಂಡಿದೆ. ಅಗತ್ಯವಿದ್ದರೆ ವಿಸ್ತರಣೆ ಮಾಡುವ ಅವಕಾಶವೂ ಇದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ಪಿಎಫ್, ಪಿಂಚಣಿ, ಗ್ರಾಜ್ಯುಟಿ, ವೈದ್ಯಕೀಯ ಭತ್ಯೆಗಳನ್ನು ಪಡೆಯಲು ಅರ್ಹತೆ ಇಲ್ಲ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Employee's State Insurance Corporation Karnataka organized walk in interview for Medical Referee post. Interview will be held on July 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X