ಕಲಬುರಗಿಯಲ್ಲಿ 10ನೇ ತರಗತಿ ಪಾಸಾದವರಿಗೆ ಕೆಲಸ ಖಾಲಿ ಇದೆ
ಕಲಬುರಗಿ, ಸೆಪ್ಟೆಂಬರ್ 13; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆಪ್ಟೆಂಬರ್ 15ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 45 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
20 ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಸೆಪ್ಟೆಂಬರ್ 15ರಂದು ಬೆಳಗ್ಗೆ 10.30ಕ್ಕೆ ನೇರ ಸಂದರ್ಶನ ನಡೆಯಲಿದೆ.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿಷ್ಠಿತ ಅಮೆಜಾನ್ ಕಂಪನಿಯವರು ಈ ನೇರ ಸಂದರ್ಶನ ನಡೆಸುತ್ತಿದ್ದಾರೆ.

ಎಸ್. ಎಸ್. ಎಲ್. ಸಿ. ಪಾಸಾದ ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.
ಅಭ್ಯರ್ಥಿಗಳು ಡ್ರೈವಿಂಗ್ ಲೈಸನ್ಸ್ ಹಾಗೂ ಬೈಕ್ ಹೊಂದಿರಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ 08472-274846.
ನೇರ ಸಂದರ್ಶನ ನಡೆಯುವ ಸ್ಥಳ; ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ.
ಅರ್ಜಿ ಆಹ್ವಾನ; ದಾವಣಗೆರೆ ಜಿಲ್ಲಾ ಪ್ರಾಣಿದಯಾ ಸಂಘಕ್ಕೆ ಒಬ್ಬ ಗೌರವಾನ್ವಿತ ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರರು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನ್ಯಾಯಾಲಯಗಳಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯದ ಬಗ್ಗೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ಹಾಗೂ ಪ್ರಕರಣಗಳು ಯಾವ ಹಂತದಲ್ಲಿದೆ, ಇಂತಹ ಪ್ರಕರಣಗಳ ಕುರಿತು ಕೈಗೊಳ್ಳಬಹುದಾದ ಕಾನೂನು ಕ್ರಮಗಳ ಕುರಿತು ಸಲಹೆ ನೀಡಬೇಕಿದೆ.
ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಾಣಿದಯಾ ಸಂಘದ ವತಿಯಿಂದ ಒಬ್ಬ ಗೌರವಾನ್ವಿತ ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರರನ್ನು ನೇಮಿಸಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು ನೇಮಕಗೊಂಡ ನಂತರ ಯಾವುದೇ ಸೇವಾ ಶುಲ್ಕವನ್ನು ಪಡೆಯದೆ ಪ್ರಾಣಿ ಕಲ್ಯಾಣಕ್ಕಾಗಿ ಕೆಲಸ ನಿರ್ವಹಿಸಲು ಆಸಕ್ತರಾಗಿರಬೇಕು.
ಅರ್ಜಿ ಸಲ್ಲಿಸುವವರು 15 ವರ್ಷ ವಕೀಲ ವೃತ್ತಿಯಲ್ಲಿ ಅನುಭವ ಹೊಂದಿರಬೇಕು. ಕಾರ್ಯನಿರ್ವಹಿಸಲು ಆಸಕ್ತರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಇವರನ್ನು ಸಂಪರ್ಕಿಸಬಹುದಾಗಿದೆ.
ಪರೀಕ್ಷೆಗಳಿಗೆ ತರಬೇತಿ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ. ಬಿ . ಪಿ. ಎಸ್‌ನವರು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಸೆಪ್ಟೆಂಬರ್ 16ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944/ 9964760090.












Click it and Unblock the Notifications