• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಾ.16ರಂದು ಬಳ್ಳಾರಿಯಲ್ಲಿ ಗೃಹರಕ್ಷಕ ದಳ ಸಂದರ್ಶನ

|
Google Oneindia Kannada News

ಬಳ್ಳಾರಿ, ಮಾರ್ಚ್ 13: ಬಳ್ಳಾರಿ ಜಿಲ್ಲೆಯ ರೂಪನಗುಡಿ, ಸಿರುಗುಪ್ಪ, ಕುಡುತಿನಿ, ತೋರಣಗಲ್ಲು ಮತ್ತು ಬಳ್ಳಾರಿ ಘಟಕದಲ್ಲಿ ಗೃಹರಕ್ಷಕರ ವಾದ್ಯವೃಂದ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಗೃಹರಕ್ಷಕರ ವಾದ್ಯವೃಂದ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಗೆ ಮಾ.16ರಂದು ಬೆಳಿಗ್ಗೆ 8ಕ್ಕೆ ಬಳ್ಳಾರಿ ನಗರದ ಡಿ.ಎ.ಆರ್ ಮೈದಾನದಲ್ಲಿ ಸಂದರ್ಶನ ನಡೆಯುತ್ತದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು; ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಮೈಸೂರು; ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳು ತರಬೇಕಾದ ದಾಖಲೆಗಳು:

ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕುಟುಂಬದ ಪಡಿತರ ಚೀಟಿ, ಡ್ರೈವಿಂಗ್ ಲೈಸೆನ್ಸ್ ಜೊತೆಗೆ ಸಂದರ್ಶನ ಪತ್ರ ತರುವುದು ಕಡ್ಡಾಯವೆಂದು ಅವರು ತಿಳಿಸಿದ್ದಾರೆ.

ಧಾರವಾಡದಲ್ಲಿ ಹೊರಗುತ್ತಿಗೆ ನೇಮಕಾತಿ: ಮಾ.22 ರಂದು ವಾಕ್ ಇನ್ಧಾರವಾಡದಲ್ಲಿ ಹೊರಗುತ್ತಿಗೆ ನೇಮಕಾತಿ: ಮಾ.22 ರಂದು ವಾಕ್ ಇನ್

ಅಭ್ಯರ್ಥಿಗಳಿಗೆ ವಿಶೇಷ ಸೂಚನೆ:

ಜೆರಾಕ್ಸ್ ದಾಖಲಾತಿಗಳನ್ನು ಪರಿಗಣಿಸುವುದಿಲ್ಲ. ಗೃಹರಕ್ಷಕ ಘಟಕದಲ್ಲಿನ ಸದಸ್ಯತ್ವ ಬಯಸಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವಾದ್ಯವೃಂದ ಸಲಕರಣೆಗಳನ್ನು ತಾವೇ ತರುವುದರ ಜೊತೆಗೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಬರಬೇಕಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಭತ್ಯೆ ಪಾವತಿಸುವುದಿಲ್ಲ ಎಂದು ಅವರು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟಕರು ತಿಳಿಸಿದ್ದಾರೆ.

English summary
Candidates who have qualified in the last physical examination for selection of Home Guards, interviewed at the DAR grounds in Ballari city at 8 am on March 16th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X