ಚಿಕ್ಕಬಳ್ಳಾಪುರದಲ್ಲಿ ಕೆಲಸ ಖಾಲಿ ಇದೆ; 62 ಹುದ್ದೆಗಳು

ಚಿಕ್ಕಬಳ್ಳಾಪುರ, ಏಪ್ರಿಲ್ 26; ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ.

ಸರ್ಕಾರದ ಆದೇಶದಂತೆ 6 ತಿಂಗಳ ಮಟ್ಟಿಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಚಿತ ವೇತನ 15,000 ರೂ. ನಿಗದಿ ಮಾಡಲಾಗಿದೆ.

Walk In Interview For Junior Female Health Assistant Post

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ 27/4/2021ರೊಳಗೆ ಕಚೇರಿಗೆ ನೇರವಾಗಿ ದಾಖಲಾತಿಗಳ ಜೊತೆ ಹಾಜರಾಗಬೇಕು. ಒಟ್ಟು 62 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ನೇಮಕಾತಿ ಪ್ರಕಟಣೆ ತಿಳಿಸಿದೆ.

ಯಾವ ಅಭ್ಯರ್ಥಿ ನೇಮಕಾತಿಗಾಗಿ ಮೊದಲು ಮೂಲ ದಾಖಲೆ ಸಲ್ಲಿಸುತ್ತಾರೋ ಅಂತಹವರಿಗೆ ಆದ್ಯತೆ ನೀಡಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಎನ್‌ಎಂ ತರಬೇತಿಯಲ್ಲಿ ತೇರ್ಗಡೆ/ ಪದವಿ ಹೊಂದಿರಬೇಕು. ವಯೋಮಿತಿ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷಗಳು. ಗಣಕಯಂತ್ರ ತರಬೇತಿ ಪೂರೈಸಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+