ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಜುಲೈ 8ರಂದು ನೇರ ಸಂದರ್ಶನ
ಬೆಂಗಳೂರು, ಜುಲೈ 06 : ದಾವಣಗೆರೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜುಲಯ 8ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಲು ಹುದ್ದೆಗಳ ಭರ್ತಿ ನಡೆಯುತ್ತಿದೆ.
ಪ್ರಯೋಗ ಶಾಲಾ ತಂತ್ರಜ್ಞರನ್ನು ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ 5 ತಿಂಗಳ (ನವೆಂಬರ್-20ರ) ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸುವವರು ದ್ವಿತೀಯ ಪಿಯುಸಿ ವಿಜ್ಞಾನ ಅಥವಾ ಎಸ್. ಎಸ್. ಎಲ್. ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯದ ಅರೇ ವೈದ್ಯಕೀಯ ಮಂಡಳಿಯ ನೋಂದಣಿ ಹೊಂದಿರಬೇಕು ಹಾಗೂ ಡಿ. ಎಂ. ಎಲ್. ಟಿ ಕೋರ್ಸ್ ಮಾಡಿರಬೇಕು.
ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ ಒಂದು ಸೆಟ್ (ಝೆರಾಕ್ಸ್) ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಜುಲೈ 8ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ತನಕ ಹಾಜರಾಗಬಹುದು.
ಸಂದರ್ಶನ ನಡೆಯುವ ಸ್ಥಳ ಜಿಲ್ಲಾ ಚಿಗಟೇರಿ ಆಸ್ವತ್ರೆ ಆವರಣ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ದಾವಣಗೆರೆ. ನೇಮಕಾತಿಯ ಆಯ್ಕೆಯಲ್ಲಿ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ 08192-297171, 08192-223761 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications