ದಾವಣಗೆರೆ; ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ
ಬೆಂಗಳೂರು, ಆಗಸ್ಟ್ 18 : ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಆಗಸ್ಟ್ 25ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎ. ಆರ್. ಟಿ ಪ್ಲಸ್ ವಿಭಾಗಕ್ಕೆ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಗಸ್ಟ್ 25ರಂದು ತಮ್ಮ ಮೂಲ ದಾಖಲಾತಿಗಳೊಂದಿಗೆ ಆಸಕ್ತರು ಬೆಳಗ್ಗೆ 11ಗಂಟೆಗೆ ನೇರ ಸಂದರ್ಶನಕ್ಕೆ ಎ. ಆರ್. ಟಿ ಪ್ಲಸ್ ವಿಭಾಗ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇಲ್ಲಿಗೆ ಹಾಜರಾಗಬಹುದು.
ಒಂದು ವೈದ್ಯಾಧಿಕಾರಿ ಹುದ್ದೆ ಖಾಲಿಯಿದೆ. ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ 36 ಸಾವಿರ ವೇತನ ನೀಡಲಾಗುತ್ತದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಯು ಎಂ. ಬಿ. ಬಿ. ಎಸ್. ಉತ್ತೀಣರಾಗಿರಬೇಕು. ವಯೋಮಿತಿ 70 ವರ್ಷದೊಳಗಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ಬ್ಯಾಂಕ್ ಪರೀಕ್ಷೆ ತರಬೇತಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಿದೆ.
ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ 9 ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಒಟ್ಟು 50 ದಿನಗಳ ಆನ್‌ಲೈನ್ ತರಬೇತಿ ಇದಾಗಿದೆ.
ತರಬೇತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ಆಗಸ್ಟ್ 25 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಬಹುದು. ಹೆಸರು ನೋಂದಾಯಿಸಲು 0821-2515944 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.












Click it and Unblock the Notifications