ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌; ಶುಶ್ರೂಷಕ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ಬೀದರ್, ಅಕ್ಟೋಬರ್ 14; ಬೀದರ್ ನಲ್ಲಿ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಕ/ ಶುಶ್ರೂಷಕಿಯರ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಅಕ್ಟೋಬರ್ 25 ರಿಂದ ಅಕ್ಟೋಬರ್ 30ರವರೆಗೆ ನೇರ ಸಂದರ್ಶನ ನಡೆಯಲಿದೆ.

4 ಐಸಿಯು ಘಟಕದಲ್ಲಿ ಖಾಲಿ ಇರುವ ಶುಶ್ರೂಷಕ/ ಶುಶ್ರೂಷಕಿಯರ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರ

ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳು ಹಾಗೂ ಅವುಗಳ ಒಂದು ಜೊತೆ ಝೆರಾಕ್ಸ್ ಪ್ರತಿ ಹಾಗೂ ಭಾವಚಿತ್ರದೊಂದಿಗೆ ಅಕ್ಟೋಬರ್ 25ರಿಂದ ಅಕ್ಟೋಬರ್ 30ರವರೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ ಕೊಡಗು; 11 ಅತಿಥಿ ಶಿಕ್ಷಕರ ಹುದ್ದೆ, ಅಕ್ಟೋಬರ್ 30ರೊಳಗೆ ಅರ್ಜಿ ಹಾಕಿ

 Walk In Interview For Nurse Post At Bidar

ನೇರ ಸಂದರ್ಶನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಲಯ ಬೀದರ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಿಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಿ

ಒಟ್ಟು 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು. ಆಯ್ಕೆಯಾ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ 14,000 ರೂ. ಗಳು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಎಂ.ಎಸ್.ಸಿ/ ಬಿ.ಎಸ್.ಸಿ./ ಡಿಪ್ಲೋಮಾ ನರ್ಸಿಂಗ್ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಐಸಿಯು ಕೆಲಸದಲ್ಲಿ 2 ವರ್ಷ ಅನುಭವವುಳ್ಳವರಿಗೆ ಆದ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೀದರ್ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9449843100 / 9449843185ಗೆ ಕರೆ ಮಾಡಬಹುದು.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಧಾರವಾಡದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2021-22 ನೇ ಸಾಲಿನಲ್ಲಿ 10 ತಿಂಗಳುಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರುವರಿಗೆ ಆದ್ಯತೆ ನೀಡಲಾಗುತ್ತದೆ. ಈ ಮೊದಲು ಅಪ್ರೆಂಟಿಸ್ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ.

ಧಾರವಾಡ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಅಪ್ರೆಂಟಿಸ್ ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ತರಬೇತಿಯು ಡಿಸೆಂಬರ್ 2021ರಿಂದ ಸೆಪ್ಟೆಂಬರ್ 2022ರ ವರೆಗೆ ಇರಲಿದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ಮಾಸಿಕ 15 ಸಾವಿರ ರೂಪಾಯಿ ಭತ್ಯೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾಭವನ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಧಾರವಾಡ ಇಲ್ಲಿ ಪಡೆದುಕೊಂಡು ಭರ್ತಿ ಮಾಡಿ ಅಕ್ಟೋಬರ್ 28ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಧಾರವಾಡ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9480654365.

ಸೆಕ್ಯುರಿಟಿ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಹುದ್ದೆಗಾಗಿ ಮಾಜಿ ಸೈನಿಕರಿಂದ (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ rank) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 21/10/2021 ಕೊನೆಯ ದಿನ.

ಆಸಕ್ತರು ಶಿವಮೊಗ್ಗದ ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Walk in interview for the nurse post at Bidar. Men and women candidates can attend interview from October 25 to 30, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X