• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಲಾರದಲ್ಲಿ ಕೆಲಸ ಖಾಲಿ ಇದೆ; ಅ.23ರಂದು ನೇರ ಸಂದರ್ಶನ

|

ಕೋಲಾರ, ಅಕ್ಟೋಬರ್ 14 : ಕೋಲಾರದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಕ್ಟೋಬರ್ 23ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

2020-21 ನೇ ಸಾಲಿನ ಎನ್. ಹೆಚ್. ಎಂ. ನಿಯಮಾವಳಿಯಂತೆ ಗುತ್ತಿಗೆ ಆಧಾರದ ಮೇಲೆ Para Medical Worker (Leprosy) ಹುದ್ದೆಗಳ ನೇಮಕಾತಿ ನಡೆಯಲಿದೆ. ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಐಐಎಸ್ಸಿ ನೇಮಕಾತಿ 2020: 85 ಸಹಾಯಕ ಹುದ್ದೆಗಳಿಗೆ ಅರ್ಜಿ

ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ ಮತ್ತು 1 ಸೆಟ್ ದೃಢೀಕರಣ ಪತ್ರದೊಂದಿಗೆ ಹಾಜರಾಗಬೇಕು. 2 ಪಾಸ್‍ ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ

ಅಭ್ಯರ್ಥಿಗಳು ವಿದ್ಯಾರ್ಹತೆ, ಕುಷ್ಠರೋಗದ ಬಗ್ಗೆ ತರಬೇತಿ ಪಡೆದ ಅನುಭವ ಪತ್ರ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಗವಿಕಲ, ಇತರೆ ಮೂಲ ಮತ್ತು ನಕಲು ದಾಖಲಾತಿಗಳನ್ನು ತರಬೇಕು.

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ

ನೇರ ಸಂದರ್ಶನ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ ಜಿಲ್ಲೆ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಕ್ಟೋಬರ್ 23ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ಆರಂಭವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

English summary
Walk in interview for para medical worker post in Kolar district. Candidates can attend interview on October 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X