ಅಂಚೆ ಇಲಾಖೆ ನೇಮಕಾತಿ: ಅಕ್ಟೋಬರ್ 14ರಂದು ಬಳ್ಳಾರಿಯಲ್ಲಿ ನೇರ ಸಂದರ್ಶನ

ಬಳ್ಳಾರಿ, ಅಕ್ಟೋಬರ್ 01: ಬಳ್ಳಾರಿಯಲ್ಲಿ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹರು ಅಕ್ಟೋಬರ್ 14ರಂದು ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು ಎಂದು ಮಾಹಿತಿ ನೀಡಲಾಗಿದೆ.

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳ ನೇಮಕಕ್ಕಾಗಿ ಅಕ್ಟೋಬರ್ 14ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

Walk In Interview For Recruitment Of Field Officers In Ballari

ಬಳ್ಳಾರಿ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಹಾಜರಾಗಬಹುದು.

ಅರ್ಹತೆಯ ವಿವರಗಳು: 5 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 10ನೇ ತರಗತಿ ಉತ್ತೀರ್ಣರಾಗಿರಬೇಕು. 5 ಸಾವಿರ ಹಾಗೂ ಅದಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಇತರೆ ಪ್ರದೇಶಗಳಿಗೆ 12ನೇ ತರಗತಿ ಉತ್ತೀರ್ಣರಾಗಿರಬೇಕು.

ಬಳ್ಳಾರಿ ಹಾಗೂ ವಿಜಯನಗರ (ಹೊಸಪೇಟೆ) ಜಿಲ್ಲೆಯ ವ್ಯಾಪ್ತಿಯಲ್ಲಿ ವಾಸಿಸುವ ವಿಳಾಸ ಪುರಾವೆಯನ್ನು ಹೊಂದಿರಬೇಕು. ವಯೋಮಿತಿ 18 ವರ್ಷ, ಗರಿಷ್ಠ ವಯಸ್ಸಿನ ಮಿತಿ ಇರುವುದಿಲ್ಲ.

ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು (ಜಿಡಿಎಸ್) ಅರ್ಹರಾಗಿರುತ್ತಾರೆ. ವಿಮಾ ಉತ್ಪನ್ನಗಳನ್ನು ಮಾರಾಟ ಮಾಡುವ ಅನುಭವ, ಕಂಪ್ಯೂಟರ್ ಜ್ಞಾನ ಅಥವಾ ಸ್ಥಳೀಯ ಪ್ರದೇಶದ ಜ್ಞಾನವಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ರೂ. 5000 ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್‌ಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಷನ್ ನೀಡಲಾಗುವುದು. ಇದರ ಹೊರತಾಗಿ ಬೇರೆ ಯಾವುದೇ ನಿಗದಿತ ವೇತನ ಇರುವುದಿಲ್ಲ.

ಈ ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು. ಸಂದರ್ಶನಕ್ಕೆ ಬರುವಾಗ ಆಧಾರ್‌ ಕಾರ್ಡ್, ಪಾನ್‌ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಂಕಪಟ್ಟಿ ದಾಖಲೆಗಳನ್ನು ಸಲ್ಲಿಸಬೇಕು. ನೋಂದಣಿಯ ಸಮಯ ಬೆಳಗ್ಗೆ 10:30 ರಿಂದ 11:30.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಡೆವಲಪ್‌ಮೆಂಟ್ ಆಫೀಸರ್ 9481694420 ಹಾಗೂ ಅಂಚೆ ಅಧೀಕ್ಷಕರ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08392-266768ಗೆ ಸಂಪರ್ಕಿಸಬಹುದು.

ತರಬೇತಿಗೆ ಅರ್ಜಿ ಆಹ್ವಾನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 5 ರಿಂದ ಆರಂಭವಾಗಲಿದೆ. ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವತಿಯರು ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+