ಶಿವಮೊಗ್ಗ; ಅರೆ ವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
ಶಿವಮೊಗ್ಗ, ಜುಲೈ 16 : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ. 20 ಶುಶ್ರೂಷಣಾಧಿಕಾರಿ, 51 ಫಾರ್ಮಾಸಿ ಅಧಿಕಾರಿ ಹಾಗೂ 17 ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು; ಯಲಹಂಕ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ
ಶುಶ್ರೂಷಣಾಧಿಕಾರಿ ಹುದ್ದೆಗೆ ಜುಲೈ 21ರಂದು ಬೆಳಗ್ಗೆ 10 ಗಂಟೆಗೆ, ಫಾರ್ಮಾಸಿ ಅಧಿಕಾರಿ ಹುದ್ದೆಗೆ ಜುಲೈ 21ರಂದು ಮಧ್ಯಾಹ್ನ 2.30ಕ್ಕೆ ಕಿರಿಯ ಪ್ರಯೋಗಶಾಲಾ ಟೆಕ್ನಾಲಾಜಿಸ್ಟ್ ಹುದ್ದೆಗೆ ಜುಲೈ 22ರ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಕೋಲಾರ; ಆಪ್ತ ಸಮಾಲೋಚಕರ ನೇಮಕಾತಿ ನೇರ ಸಂದರ್ಶನ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಹಾಗೂ 1 ಜೊತೆ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಬೆಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08182-222382 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.