ಕೊಡಗು; ಸ್ಟಾಪ್ ನರ್ಸ್ ಹುದ್ದೆಗೆ ಜುಲೈ 5ರಂದು ನೇರ ಸಂದರ್ಶನ

ಮಡಿಕೇರಿ, ಜುಲೈ 04; ಕೊಡಗು ಜಿಲ್ಲೆಯಲ್ಲಿ ಸ್ಟಾಪ್ ನರ್ಸ್ ಹುದ್ದೆಯ ನೇಮಕಾತಿಗಾಗಿ ನೇರ ಸಂದರ್ಶನವನ್ನು ಜುಲೈ 5ರಂದು ಆಯೋಜನೆ ಮಾಡಲಾಗಿದೆ. ಈ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ 34,125 ರೂ. ವೇತನ ನೀಡಲಾಗುತ್ತದೆ.

ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ (ಸ್ಟಾಪ್ ನರ್ಸ್) ಹುದ್ದೆಗೆ ಬೆಳಗ್ಗೆ 10 ರಿಂದ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

Walk In Interview For Staff Nurse Post At Kodagu

ಆಸಕ್ತ ಮತ್ತು ಅರ್ಹರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಜುಲೈ 5ರ ಬುಧವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರ ತನಕ ಹಾಜರಾಗುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ವೆಬ್‍ಸೈಟ್ nvsjnv_kodagu ಗೆ ಭೇಟಿ ನೀಡಬಹುದು ಅಥವ ದೂರವಾಣಿ ಸಂಖ್ಯೆ 9447368470, 9380802179 ಸಂಪರ್ಕಿಸಬಹುದಾಗಿದೆ.

ಅರ್ಜಿ ಆಹ್ವಾನ; ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.

ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾದ ಕೊನೆಯ ಸೆಮಿಸ್ಟರ್‌ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್‌ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೊಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ ಹಾಜರಾದವರು ನೇರ ಪ್ರವೇಶ ಪಡೆಯಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗೆ ಸಿಪೆಟ್, 437, ಹೆಬ್ಬಾಳ್ ಇಂಡಸ್ಟ್ರೀಯಲ್ ಏರಿಯಾ, ಮೈಸೂರು-570016 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 0821-2510618/ 9480253024/ 9791431827.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+