ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ನವೆಂಬರ್ 19ರಂದು ನೇರ ಸಂದರ್ಶನ

|
Google Oneindia Kannada News

ಬೆಂಗಳೂರು, ನವೆಂಬರ್ 14; ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ.

ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ ವಿಷಯ ಅಧ್ಯಯನ ಮಾಡಿರಬೇಕು.

ಬಿಬಿಎಂಪಿಯಲ್ಲಿ ಕೆಲಸ ಖಾಲಿ ಇದೆ; ನ. 15ಕ್ಕೆ ನೇರ ಸಂದರ್ಶನ ಬಿಬಿಎಂಪಿಯಲ್ಲಿ ಕೆಲಸ ಖಾಲಿ ಇದೆ; ನ. 15ಕ್ಕೆ ನೇರ ಸಂದರ್ಶನ

ವಯೋಮಿತಿ 35 ವರ್ಷಗಳು. ಕನಿಷ್ಠ ಎರಡು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 50,000 ಸಾವಿರ ರೂ.ಗಳು.

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

Walk In Interview For Technical Assistant Posts In Bengaluru On November 19

ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್‌ನಲ್ಲಿ ಉತ್ತಮ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಬಹುಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು. ತಕ್ಷಣ ಸೇರುವವರಾಗಿರಬೇಕು.

ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ

ನೇರ ಸಂದರ್ಶನ; 19/11/2021ರ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ನೇರ ಸಂದರ್ಶನ ನಡೆಯಲಿದೆ.

ವಿಳಾಸ; ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, 1ನೇ ಅಡ್ಡ ರಸ್ತೆ, ಮಾಗಡಿ ರಸ್ತೆ, ಬೆಂಗಳೂರು.

ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಮೂಲ ದಾಖಲಾತಿಗಳು ಅದರ ನಕಲು ಪ್ರತಿಗಳ ಜೊತೆ ಹಾಜರಾಗಬೇಕು ಹಾಗೂ ಒಂದು ನಕಲು ಪ್ರತಿಯನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಕೊಪ್ಪಳ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 133 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ವಿಳಾಸ www.anganwadirecruit.kar.nic.in ವೆಬ್ ಸೈಟ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಕೆ ಮಾಡಲು ಡಿಸೆಂಬರ್ 13 ಕೊನೆಯ ದಿನ.

ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಅಥವಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

ನಿರುದ್ಯೋಗಿಗಳಿಗೆ ಜೀವನ ಭತ್ಯೆಗೆ ಅರ್ಜಿ ಆಹ್ವಾನ; ಮೂಲನಿವಾಸಿ ಪರಿಶಿಷ್ಟ ಪಂಗಡದವರಾದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ 2021-22 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ಜೇನುಕುರುಬ ಮತ್ತು ಕೊರಗ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ಎಸ್‍ಎಸ್‍ಎಲ್‍ಸಿ ರೂ. 10 ಸಾವಿರ, ಪಿಯುಸಿ ಮತ್ತು ತತ್ಸಮಾನ ಕೋರ್ಸ್‍ಗಳು (ಪ್ರತಿ ವರ್ಷಕ್ಕೆ) ರೂ.12 ಸಾವಿರ, ಎಲ್ಲಾ ಪದವಿ ಕೋರ್ಸ್‍ಗಳು (ಪ್ರತಿ ವರ್ಷಕ್ಕೆ) ರೂ.15 ಸಾವಿರ, ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳು (ಪ್ರತಿ ವರ್ಷಕ್ಕೆ) ರೂ.18 ಸಾವಿರ ಆಗಿದೆ.

ಅಭ್ಯರ್ಥಿಗಳು 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಣ ಪತ್ರವನ್ನು ಅರ್ಜಿಯ ಜೊತೆ ಲಗತ್ತಿಸಬೇಕು. ಈ ಕೋರ್ಸ್‍ಗಳಲ್ಲಿ ಅಭ್ಯರ್ಥಿಗಳು ವ್ಯಾಸಂಗವನ್ನು ಮುಂದುವರಿಸದೇ ನಿಲ್ಲಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಧನವನ್ನು ರದ್ದುಪಡಿಸಲಾಗುವುದು. ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ವಿವರವನ್ನು ಸಲ್ಲಿಸಬೇಕು.

ಜೇನುಕುರುಬ ಮತ್ತು ಕೊರಗ ವಿದ್ಯಾವಂತ ಯುವಕ, ಯುವತಿಯರಿಗೆ ನಿರುದ್ಯೋಗಿ ಜೀವನ ಭತ್ಯೆ ನೀಡಲಾಗುತ್ತದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ರೂ. 2 ಸಾವಿರ, ಪಿಯುಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ರೂ. 2,500, ಎಲ್ಲಾ ಪದವಿ ಕೋರ್ಸ್‍ಗಳಲ್ಲಿ ತೇರ್ಗಡೆಯಾದವರಿಗೆ ರೂ. 3,500 ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ತೇರ್ಗಡೆ ಹೊಂದಿದವರಿಗೆ ರೂ. 4,500 ಆಗಿದೆ.

ನಿರುದ್ಯೋಗ ಜೀವನ ಭತ್ಯೆಗೆ ಗರಿಷ್ಠ ವಯೋಮಿತಿ 40 ವರ್ಷದ ಒಳಗಿರಬೇಕು. ನಿರುದ್ಯೋಗಿಯೆಂದು ನೋಟರಿಯಿಂದ ಅಫಿಡವಿಟ್‍ ಪಡೆದು ಬಯೋಡಾಟಾದೊಂದಿಗೆ ಸಲ್ಲಿಸಬೇಕು. ಜೀವನ ಭತ್ಯೆಯನ್ನು ಸರ್ಕಾರ, ಖಾಸಗಿ, ಸ್ವಯಂ ಉದ್ಯೋಗಗಳಡಿ ಉದ್ಯೋಗ ದೊರಕಿದ ಅಥವಾ ಮೂರು ವರ್ಷಗಳ ಅವಧಿಗೆ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಪಾವತಿಸಲಾಗುವುದು.

ಈ ಜೀವನ ಭತ್ಯೆಯನ್ನು ಪಡೆಯುವ ಅಭ್ಯರ್ಥಿಗಳು ಕೌಶಲ್ಯಾಭಿವೃದ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಡ್ಡಾಯವಾಗಿ ತರಬೇತಿ ಪಡೆಯಬೇಕು. ನಿರುದ್ಯೋಗಿ ಜೀವನ ಭತ್ಯೆ ಮಂಜೂರಾತಿಗೆ ಅಭ್ಯರ್ಥಿಗಳ ವಿವರ, ಶೈಕ್ಷಣಿಕ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಫಿಡವಿಟ್, ಬ್ಯಾಂಕ್ ಖಾತೆ ವಿವರದ ದಾಖಲಾತಿಗಳನ್ನು ಸಲ್ಲಿಸಬೇಕು.

ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಪೊನ್ನಂಪೇಟೆ, ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ, ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇವರನ್ನು ಸಂಪರ್ಕಿಸಬಹುದು.

Recommended Video

ರೇಡಿಯೋದಿಂದ ರಾಜಕೀಯದ ವರೆಗೂ ಲಾವಣ್ಯ ನಡೆದು ಬಂದ ಹಾದಿ | Oneindia Kannada

English summary
Directorate of health and family welfare dervices Karnataka invited applications from candidates for Technical Assistant posts. Walk in interview on November 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X