ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ನೇರ ಸಂದರ್ಶನ
ಶಿವಮೊಗ್ಗ, ಮೇ 15 : ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಮೇ 18ರಂದು ಬೆಳಗ್ಗೆ 10 ರಿಂದ 1 ಗಂಟೆಯ ತನಕ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಾಮಾನ್ಯ ಕರ್ತವ್ಯದ 4 ವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎಂಬಿಬಿಎಸ್ ಪದವೀಧರರನ್ನು ಗುತ್ತಿಗೆ ಆಧಾರದ ಮೇಲೆ ನಿಬಂಧನೆಗಳಿಗೆ ಒಳಪಟ್ಟು ನೇರವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಉದ್ಯೋಗ, ವೇತನ ಕಡಿತದ ಘೋಷಣೆ ಮಾಡಿದ ಝೊಮ್ಯಾಟೋ
ಒಂದು ವೇಳೆ ಎಂಬಿಬಿಎಸ್ ವೈದ್ಯರು ಲಭ್ಯವಿಲ್ಲದಿದ್ದರೆ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಅಭ್ಯರ್ಥಿಗಳ ನೇಮಕಾತಿಯು ವಾಕ್ ಇನ್ ಇಂಟರ್ ವ್ಯೂ ಮತ್ತು ರೋಸ್ಟರ್ ಆಧಾರದ ಮೇಲೆ ನಡೆಯಲಿದೆ.
KSCDRC ನೇಮಕಾತಿ: 51 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಆಗಮಿಸುವಾಗ ಮೂಲ ದಾಖಲೆಗಳು ಹಾಗೂ ದೃಢೀಕೃತ ಝೆರಾಕ್ಸ್ ದಾಖಲೆಗಳನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
5 ಸಾವಿರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರು ಅರ್ಜಿ ಹಾಕುವುದು ಹೇಗೆ?
ಮೇ 18ರ ಸೋಮವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ಗಂಟೆಯ ತನಕ ಶಿವಮೊಗ್ಗದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.
ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು dho2shimoga@gamil.com ಗೆ ಮೇ 18ರೊಳಗಾಗಿ ಸಲ್ಲಿಸುವಂತೆ ಕೋರಲಾಗಿದೆ.