• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಧಾರವಾಡ, ನವೆಂಬರ್ 23; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

ವಿಶ್ವಬ್ಯಾಂಕ್ ನೆರವಿನ ಕರ್ನಾಟಕ ಜಲಾನಯನ ಅಭಿವೃದ್ಧಿ ಇಲಾಖೆ ಪ್ರಾಯೋಜಿತ ರಿವಾರ್ಡ್ (ಕೃಷಿಯ ಸುಸ್ಥಿರತೆಗಾಗಿ ಜಲಾನಯನ ಪ್ರದೇಶಗಳನ್ನು ಪುನಃಶ್ಚೇತನಗೊಳಿಸುವುದು) ಯೋಜನೆಯಡಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಬ್ಯಾಂಕ್ ಆಫ್ ಬರೋಡಾ 2022: 60 ವಿವಿಧ ಐಟಿ ಅಧಿಕಾರಿ ಹುದ್ದೆಗಳಿವೆಬ್ಯಾಂಕ್ ಆಫ್ ಬರೋಡಾ 2022: 60 ವಿವಿಧ ಐಟಿ ಅಧಿಕಾರಿ ಹುದ್ದೆಗಳಿವೆ

ಕನ್ಸಲ್ಟೆಂಟ್- ಜಿ.ಐ.ಎಸ್.; ಎಸ್.ಆರ್.ಎಫ್- ಮಣ್ಣು ವಿಶ್ಲೇಷಣೆ ಹಾಗೂ ಜಿ.ಐ.ಎಸ್., ಯೋಜನಾ ಸಹಾಯಕರು-ಮಣ್ಣು ವಿಶ್ಲೇಷಣೆ, ಜಿ.ಐ.ಎಸ್. ಹಾಗೂ ಪಿ.ಎಂ.ಸಿ.; ಸಹಾಯಕರು- ಮಣ್ಣು ವಿಶ್ಲೇಷಣೆ, ಪಿ.ಎಂ.ಸಿ. ಹಾಗೂ ಹೈಡ್ರಾಲಜಿ ಹುದ್ದೆ ತುಂಬಲಾಗುತ್ತಿದೆ.

ಕೆಎಸ್‌ಆರ್‌ಟಿಸಿಯ ಈ ನೇಮಕಾತಿ ಆದೇಶ ನಕಲಿ, ಎಚ್ಚರ ಕೆಎಸ್‌ಆರ್‌ಟಿಸಿಯ ಈ ನೇಮಕಾತಿ ಆದೇಶ ನಕಲಿ, ಎಚ್ಚರ

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಕೌಶಲ್ಯ, ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಡಿಸೆಂಬರ್ 1, 2, 3, ರಂದು ಸಂದರ್ಶನ, ಪರೀಕ್ಷೆ ನಡೆಯಲಿದೆ.

ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್‌ ನೇಮಕಾತಿ, ಅರ್ಜಿ ಹಾಕಿ ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್‌ ನೇಮಕಾತಿ, ಅರ್ಜಿ ಹಾಕಿ

ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಕೃಷಿ ವಿಶ್ವ ವಿದ್ಯಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಸಂಶೋಧನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಗೆ ಅರ್ಜಿ ಆಹ್ವಾನ; ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ 1500 ನಿರುದ್ಯೋಗಿ ಯುವಕ, ಯುವತಿಯರಿಗೆ ತರಬೇತಿ ನೀಡಲಾಗುತ್ತಿದೆ.

500 ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ NABH ನಿಂದ ಮಾನ್ಯತೆ ಪಡೆದ ಆಸ್ಪತ್ರೆಗಳ ಮೂಲಕ ಶೇ 75ರಷ್ಟು ಉದ್ಯೋಗ ಖಾತರಿಯೊಂದಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಟ್ರೈನಿಂಗ್ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅರ್ಜಿ ಕರೆಯಲಾಗಿದೆ.

ವಸತಿ ಸಹಿತ ತರಬೇತಿ ಇದಾಗಿದೆ. ಅರ್ಹ ಅಭ್ಯರ್ಥಿಗಳು www.sw.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಡಿಸಿ ಕಾಂಪೌಂಡ್, ಧಾರವಾಡ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 0836-2447201.

ಸಮಾಜ ಕಾರ್ಯಕರ್ತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ; ಕರ್ನಾಟಕ ರಾಜ್ಯದಲ್ಲಿ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳು ಹಾಗೂ ಬಾಲನ್ಯಾಯ ಮಂಡಳಿಗೆ ಸಮಾಜ ಕಾರ್ಯಕರ್ತ ಸದಸ್ಯರ ಆಯ್ಕೆ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ಖಾಲಿಯಿರುವ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ, 2015ರ ಸೆಕ್ಷನ್ 27ರನ್ವಯ ಹಾಗೂ ಮಾದರಿ ನಿಯಮಗಳು, 2016ನ್ನು ಪರಿಷ್ಕರಿಸಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ, 2021 ಹಾಗೂ ಮಾದರಿ ನಿಯಮಗಳು 2022 ಅನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳ ಮತ್ತು ಬಾಲನ್ಯಾಯ ಮಂಡಳಿಯ ಸಮಾಜ ಕಾರ್ಯಕರ್ತ ಸದಸ್ಯರುಗಳಿಗೆ ಪರಿಷ್ಕೃತ ಮಾರ್ಗಸೂಚಿಯನ್ವಯ ಗೌರವಧನ ಪಾವತಿಸಲಾಗುವುದು. ಈ ಗೌರವಧನವು ಉಪಸ್ಥಿತಿ ಭತ್ಯೆ, ಪ್ರಯಾಣ ಭತ್ಯೆ ಮತ್ತು ರಾಜ್ಯ ಸರ್ಕಾರವು ನಿಗದಿಪಡಿಸುವ ಇನ್ನಿತರೆ ಭತ್ಯೆಗಳನ್ನು ಒಳಗೊಂಡಿರುತ್ತದೆ.

ಅರ್ಜಿಗಳನ್ನು ಡಿಸೆಂಬರ್ 3ರ ತನಕ ಸಲ್ಲಿಸಬಹುದಾಗಿದೆ. ಅರ್ಜಿದಾರರು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಕೊನೆಯ ದಿನಾಂಕದೊಳಗೆ ಖುದ್ದು ಅಥವಾ ಅಂಚೆ (ರಿಜಿಸ್ಟರ್ ಪೋಸ್ಟ್) ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ವಿಳಾಸ; ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಮತ್ತು ಸದಸ್ಯ ಕಾರ್ಯದರ್ಶಿ, ರಾಜ್ಯ ಮಟ್ಟದ ಆಯ್ಕೆ ಸಮಿತಿ, 3ನೇ ಮಹಡಿ, ವಿಶ್ವೇಶ್ವರಯ್ಯ ಚಿಕ್ಕಗೋಪುರ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001.

ಅಭ್ಯರ್ಥಿಗಳು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿಯ ಅಧ್ಯಕ್ಷರು, ಸದಸ್ಯರುಗಳ ಆಯ್ಕೆ ಸಂಬಂಧ, ಈ ಹಿಂದೆ ನಿರ್ದೇಶನಾಲಯದಿಂದ ನೀಡಿದ ಪ್ರಕಟಣೆ ದಿನಾಂಕ13/10/2020, 30/01/2021 ಹಾಗೂ 14/07/2022ರನ್ವಯ ಈಗಾಗಲೇ ಅರ್ಜಿ ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.

ಬಾಲನ್ಯಾಯ ಮಂಡಳಿ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಯು ಎಲ್ಲಾ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಲ್ಲಿ ಲಭ್ಯವಿರುತ್ತದೆ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಸಹ ಲಭ್ಯವಿದೆ.

English summary
Walk in interview and written test at University of Agricultural Sciences, Dharwad on December 1, 2 and 3 for various post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X