ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ. 30 ರಂದು ಕೊಪ್ಪಳದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ಕೊಪ್ಪಳ, ಸೆ. 28 : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಸೆ. 30 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಸೆ. 30 ರ ಬೆಳಿಗ್ಗೆ 10: 30 ರಿಂದ ಮಧ್ಯಾಹ್ನ 3:30ರ ವರಗೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

Breaking; ಕೊಪ್ಪಳದ ಕನಕಗಿರಿಯ ಆಸ್ಪತ್ರೆ ಸ್ಥಳಾಂತರ, ಸ್ಪಷ್ಟನೆBreaking; ಕೊಪ್ಪಳದ ಕನಕಗಿರಿಯ ಆಸ್ಪತ್ರೆ ಸ್ಥಳಾಂತರ, ಸ್ಪಷ್ಟನೆ

ಹುಬ್ಬಳ್ಳಿಯ ಸನ್ ಇಂಡಿಯಾ ಗ್ರೂಪ್ ಆಫ್ ಪ್ರೈವೇಟ್ ಲಿಮಿಟೆಡ್ ಭಾಗವಹಿಸಿ, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

Walk in interview for various posts in Koppal on 30th September

ಕೊಪ್ಪಳ ಜಿಲ್ಲೆಯ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ತಮ್ಮ ಸ್ವ-ವಿವರದ ಮಾಹಿತಿ, ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು. ಅಥವಾ ಮೊಬೈಲ್ ಸಂಖ್ಯೆ 9353515518 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಗ್ರಾಮೀಣ ಭಾಗದವರಿಗೆ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ.

ಆರ್ಸೆಟಿ ವತಿಯಿಂದ 30 ದಿನಗಳ ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ಮತ್ತು ಮಹಿಳಾ ಹೊಲಿಗೆ ತರಬೇತಿ ಹಾಗೂ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ/ ಕುರಿ ಸಕಾಣಿಕೆ ತರಬೇತಿಯನ್ನು ಉಚಿತವಾಗಿ ಗ್ರಾಮೀಣ ಭಾಗದ ಆಸಕ್ತರಿಗೆ ನೀಡಲಾಗುತ್ತಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅರ್ಜಿದಾರರು 18 ವರ್ಷದ ಮೇಲೆ ಮತ್ತು 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು ಎಂದು ಮಾಹಿತಿ ನೀಡಿದ್ದಾರೆ.

ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗೆ ಅಕ್ಟೋಬರ್ 11 ರಂದು ಸಂದರ್ಶನ ನಡೆಯಲಿದೆ. ಅ. 12 ರಿಂದ ತರಬೇತಿ ಪ್ರಾರಂಭಿಸಲಾಗುವುದು. ಆಸಕ್ತರು ತಮ್ಮ ಆಧಾರ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್ ಸೈಜ್‌ನ ಮೂರು ಭಾವಚಿತ್ರ ಹಾಗೂ ಮಾಕ್ಸ್ ಕಾರ್ಡ್ ಜೆರಾಕ್ಸ್ ಪ್ರತಿ ಸೇರಿದಂತೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿಯನ್ನು ಕೊಪ್ಪಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿರ್ದೇಶಕರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-231038ಕ್ಕೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Walk in interview for various posts in Koppal on 30th September organized by District Employment Exchange Centre. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X