ಬಳ್ಳಾರಿ ಅಂಚೆ ವಿಭಾಗದಲ್ಲಿ ನೇರ ಸಂದರ್ಶನ
ಬಳ್ಳಾರಿ, ಮಾರ್ಚ್ 10; ಬಳ್ಳಾರಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆ ಮಾಡಲಾಗುತ್ತಿದೆ.
ಅಂಚೆ ಅಧೀಕ್ಷಕರಾದ ಕೆ. ಮಹಾದೇವಪ್ಪ ಈ ಕುರಿತು ಮಾಹಿತಿ ನೀಡಿದ್ದು, ಪ್ರತಿನಿಧಿಗಳ ಆಯ್ಕೆಗಾಗಿ ಮಾರ್ಚ್ 25ರಂದು ಬೆಳಗ್ಗೆ 11ಕ್ಕೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಕೋಟೆ ಪ್ರದೇಶದಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ಅರ್ಹತೆ: ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿಬೇಕು. 18 ರಿಂದ 50 ವರ್ಷಗಳ ಒಳಗಿರಬೇಕು.
ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಹಾಗೂ ಮಾಜಿ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.
ನುರಿತ, ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ಇದೆ. ಆಯ್ಕೆಯಾದ ಅಭ್ಯರ್ಥಿಗಳು 5ಸಾವಿರ ರೂ. ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ.
ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮಿಶನ್ ನೀಡಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08392-266037/266768 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications