ಬೆಳಗಾವಿಯಲ್ಲಿ ವಿವಿಧ ಹುದ್ದೆಗಳ ಭರ್ತಿ; ಜ.31ಕ್ಕೆ ನೇರ ಸಂದರ್ಶನ

ಬೆಳಗಾವಿ, ಜನವರಿ 29: ಬೆಳಗಾವಿಯಲ್ಲಿ ನೂತನವಾಗಿ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ನಿಯಮಿತ ಹಣಕಾಸು ಸಂಸ್ಥೆ ಆರಂಭವಾಗುತ್ತಿದೆ. ಇಲ್ಲಿ ಕಾರ್ಯ ನಿರ್ವಹಣೆ ಮಾಡಲು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.

ಹಣಕಾಸು ಸಂಸ್ಥೆಯಲ್ಲಿ ಕಾರ್ಯ ನಿರ್ವಹಣೆ ಮಾಡಲು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಪದವೀಧರರು ಬೇಕಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು 31/1/2021ರಂದು 10 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ (1) ಹುದ್ದೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅನುಭವ ಉಳ್ಳವರು, ಕಂಪ್ಯೂಟರ್ ತರಬೇತಿ ಹೊಂದಿದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

Walk In Interview In Belagavi On January 31

ಕ್ಲರ್ಕ್/ ಕ್ಯಾಶಿಯರ್ (2) ಹುದ್ದೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ ಅಭ್ಯರ್ಥಿಗಳು, ಕಂಪ್ಯೂಟರ್ ತರಬೇತಿ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಜನವರಿ 31ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಶ್ರೀ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ನಿಯಮಿತ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಚನ್ನರಾಜ ಬಿ. ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ; ಪ್ಲಾಟ್ ನಂಬರ್ 511, ಸ್ಕೀಮ್ ನಂ 40, 3ನೇ ಹಂತ, ಮುರಳಿಧರ ಕಾಲೋನಿ, ಹನುಮಾನ ನಗರ, ಬೆಳಗಾವಿ 590001.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+