ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೀದರ್‌; ಅಕ್ಟೋಬರ್ 4ರಂದು ನೇರ ಸಂದರ್ಶನ

|
Google Oneindia Kannada News

ಬೀದರ್, ಸೆಪ್ಟೆಂಬರ್ 26: ಬೀದರ್ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಕ್ಟೋಬರ್ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಅರ್ಹ, ಆಸಕ್ತ ಅಭ್ಯರ್ಥಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಅಕ್ಟೋಬರ್ 4ರ ಬೆಳಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ; ಆಸಕ್ತರು ಅರ್ಜಿ ಹಾಕಿ

ನೇರ ಸಂದರ್ಶನ ಬೀದರ್ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನಡೆಯಲಿದೆ. ಆಸಕ್ತು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಬೀದರ್ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಹೈಕೋರ್ಟ್ ನೇಮಕಾತಿ; ಸ್ನಾತಕೋತ್ತರ ಪದವೀಧರರು ಅರ್ಜಿ ಹಾಕಿ ಕರ್ನಾಟಕದ ಹೈಕೋರ್ಟ್ ನೇಮಕಾತಿ; ಸ್ನಾತಕೋತ್ತರ ಪದವೀಧರರು ಅರ್ಜಿ ಹಾಕಿ

 Walk In Interview In Bidar For Postal Insurance Agent Post

10 ದಿನಗಳ ತರಬೇತಿಗೆ ಅರ್ಜಿ ಹಾಕಿ; ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ, ಕೆನರಾ ಬ್ಯಾಂಕ್‍ನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿಪಿಎಲ್ ಕುಟುಂಬದ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರಿಗೆ ಕೃಷಿ ಆಧಾರಿತ 10 ದಿನಗಳ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ತರಬೇತಿ ಆಯೋಜನೆ ಮಾಡಲಾಗಿದೆ.

ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ ಜಲಸಂಪನ್ಮೂಲ ಇಲಾಖೆಯಲ್ಲಿ 5 ಸಾವಿರಕ್ಕೂ ಅಧಿಕ ಹುದ್ದೆ ಭರ್ತಿ

ತರಬೇತಿಯು ನಿರುದ್ಯೋಗ ಯುವಕರಿಗೆ, ಕೃಷಿಕರಿಗೆ ಆರ್ಥಿಕ ಪ್ರಗತಿ ಹೊಂದಲು ಹಾಗೂ ಸ್ವ-ಉದ್ಯೋಗ ಕೈಗೊಳ್ಳಲು ಅನುಕೂಲವಾಗಲಿದೆ. ಈ ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ಕನ್ನಡ ಓದಲು, ಬರೆಯಲು ಬರುತ್ತಿರಬೇಕು. ತರಬೇತಿಯಲ್ಲಿ ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಉದ್ಯಮಶಿಲತಾ ಅಭಿವೃದ್ಧಿಯ ಮಾಹಿತಿಯನ್ನು ನೀಡಲಾಗುವುದು.

ಆಸಕ್ತರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9483485489, 9482188780, 9743321062, 8197022501 ಮತ್ತು 08284-295307.

ತರಬೇತಿ; ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಕೊಪ್ಪಳ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (ಡಿಟಿಡಿಎಮ್) ಮತ್ತು ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ (ಡಿಎಮ್‌ಸಿಹೆಚ್) ಕೋರ್ಸ್‌ಗಳ 3+1 ಅವಧಿಯ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ (ಡಿಟಿಡಿಎಮ್) ಮತ್ತು ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ (ಡಿಎಮ್‌ಸಿಹೆಚ್) ಕೋರ್ಸ್‌ಗಳ ತರಬೇತಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡವರು ಅರ್ಜಿ ಹಾಕಬಹುದು.

ಕರ್ನಾಟಕ ರಾಜ್ಯ ಸರಕಾರ ಮತ್ತು ಎಐಸಿಟಿಇ ವತಿಯಿಂದ ಅನುಮೋದಿಸಲ್ಪಟ್ಟಿದ್ದು, ಪ್ರವೇಶಕ್ಕೆ ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 5 ವರ್ಷ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಆದರದ ಮೇಲೆ 2021-22ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳು ಡಿಪ್ಲೋಮಾ ಪ್ರಥಮ ಸೆಮಿಷ್ಟರ್‌ಗೆ ಪ್ರವೇಶವನ್ನು ಪಡೆದಿದ್ದು, ಇನ್ನೂ ಕೆಲವು ಸೀಟುಗಳು ಲಭ್ಯ ಇವೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಉಪಯೋಗಿಸಿಕೊಂಡು ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕೊಪ್ಪಳ ಕಾರ್ಯಾಲಯ ಮತ್ತು ದೂರವಾಣಿ ಸಂಖ್ಯೆ 9902556110ಗೆ ಸಂಪರ್ಕಿಸಬಹುದು.

ಅರ್ಜಿ ಆಹ್ವಾನ; 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿನ ಫಲಾನುಭವಿಗಳ ಆಧಾರಿತ ಕಾರ್ಯಕ್ರಮವಾದ 'ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ' ಹೈನುಗಾರಿಕೆಗೆ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕಲಬುರಗಿ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹೈನುಗಾರಿಕೆ ಘಟಕ ಸ್ಥಾಪನೆಗಾಗಿ ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕೃಷಿ ಕೂಲಿ ಕಾರ್ಮಿಕರು ಹಾಗೂ ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡ ಅಸಕ್ತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ಸಂಬಂಧಪಟ್ಟ ಆಯಾ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 21ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

English summary
Walk in interview for insurance agent of post office in Bidar. Candidates can attend interview on 4/10/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X