ಚಾಮರಾಜನಗರ; ಕೆಲಸ ಖಾಲಿ ಇದೆ, ಆ.14ರಂದು ನೇರ ಸಂದರ್ಶನ

ಬೆಂಗಳೂರು, ಆಗಸ್ಟ್ 10 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಚಾಮರಾಜನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತರು ಆಗಸ್ಟ್ 14ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೋವಿಡ್ ತುರ್ತು ಪರಿಸ್ಥಿತಿ ಹಿನ್ನಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಡಿಇಐಸಿ ಮ್ಯಾನೇಜರ್ 1, ಲ್ಯಾಬ್ ಟೆಕ್ನಿಷಿಯನ್ 1, ಆರ್‌ಎಂಎನ್‌ಸಿಎಚ್‌ ಮಹಿಳಾ ಕೌನ್ಸಿಲರ್ 1, ಮೆಡಿಕಲ್ ಆಫೀಸರ್ 4, ಫಿಜಿಶಿಯನ್ ಎಂಬಿಬಿಎಸ್ 3 ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Walk In Interview In Chamarajanagar On August 14

ಈ ನೇಮಕಾತಿಯು ತಾತ್ಕಾಲಿಕವಾಗಿದ್ದು ಮಾರ್ಚ್ 31, 2021ರ ತನಕ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಸಂಚಿತ ವೇತನ ಹೊರತುಪಡಿಸಿ ಇತರ ಭತ್ಯೆಗಳಿಗೆ ಅರ್ಹರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ಅಗತ್ಯ ಶೈಕ್ಷಣಿಕ ಪ್ರಮಾಣ ಪತ್ರಗಳು ಮತ್ತು ಅವುಗಳ ಝೆರಾಕ್ಸ್ ಪ್ರತಿಗಳನ್ನು ತರಬೇಕು ಎಂದು ತಿಳಿಸಲಾಗಿದೆ. ನೇಮಕಾತಿಯನ್ನು ರೋಸ್ಟರ್, ಮೆರಿಟ್ ಮತ್ತು ಅನುಭವದ ಆಧಾರದ ಮೇಲೆ ನಡೆಸಲಾಗುತ್ತದೆ.

ನೇರ ಸಂದರ್ಶನದ ಸ್ಥಳ, ಸಮಯ : ನೇರ ಸಂದರ್ಶನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ನಂಬರ್ 308, 3ನೇ ಮಹಡಿ, ಜಿಲ್ಲಾಡಳಿತ ಭವನ, ಚಾಮರಾಜನಗರ ಇಲ್ಲಿ ನಡೆಯಲಿದೆ. ಸಮಯ ಬೆಳಗ್ಗೆ 11 ರಿಂದ 1 ಗಂಟೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+