ಚಿತ್ರದುರ್ಗ; ಡಿಸೆಂಬರ್ 13ರಂದು ನೇರ ಸಂದರ್ಶನ, ವಿವರಗಳು
ಚಿತ್ರದುರ್ಗ, ಡಿಸೆಂಬರ್ 10: ಚಿತ್ರದುರ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 13ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ. 3 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಕರೆ ನೀಡಲಾಗಿದೆ.
ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿಸೆಂಬರ್ 13ರ ಶುಕ್ರವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ತನಕ ನೇರ ನೇಮಕಾತಿ ಸಂದರ್ಶನ ನಡೆಯಲಿದೆ. ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ.

ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೋಗಳೊಂದಿಗೆ ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147.
ತರಬೇತಿಗೆ ಅರ್ಜಿ ಹಾಕಿ: ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/ 180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಪಡೆಯಬಹುದು.
ಈ ತರಬೇತಿಯು 2025ರ ಜನವರಿಯಿಂದ ಪ್ರಾರಂಭವಾಗಲಿವೆ. ತರಬೇತಿ ಪಡೆಯಲು ಆಸಕ್ತಿ ಹೊಂದಿರುವವರು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.
ಅಭ್ಯರ್ಥಿಗಳಿಗೆ ವಯೋಮಿತಿ 16 ವರ್ಷದಾಟಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರುತ್ತದೆ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುತ್ತದೆ.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು/ 180 ದಿನಗಳ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುವುದು. ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿಂದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದು.
ಅರ್ಜಿ ಪಡೆಯುವ ಮತ್ತು ಕಳುಹಿಸುವ ವಿಳಾಸ. ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶ ನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ, ಕಲಬುರಗಿ 585105. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ಸಂಖ್ಯೆಗಳು 08472-245340, 9916726886, 9742307153.












Click it and Unblock the Notifications