ಧಾರವಾಡ; ವಿವಿಧ ಹುದ್ದೆಗಳಿಗೆ ಮೇ 15ರಂದು ನೇರ ಸಂದರ್ಶನ

ಧಾರವಾಡ, ಮೇ 12; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ವೈದ್ಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಮೇ 15ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮೇ 15ರ ಶನಿವಾರ ಬೆಳಗ್ಗೆ 11 ಗಂಟೆಗೆ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಮೂಲ ದಾಖಲಾತಿಗಳ ಜೊತೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಫಿಜಿಶಿಯನ್ (ಜನರಲ್ ಮೆಡಿಸನ್) 1, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು 1, ಅರವಳಿಕೆ ತಜ್ಞರು 1, ಸಾಮಾನ್ಯ ಕರ್ತವ್ಯ ನಿರತ ವೈದ್ಯರು 5, ಶುಶ್ರೂಷಕಿಯರು 4, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು 4, ಫಾರ್ಮಾಸಿಸ್ಟ್ 3, ಪ್ರಯೋಗಶಾಲಾ ತಂತ್ರಜ್ಞರು 2, ಡಾಟಾ ಎಂಟ್ರಿ ಆಪರೇಟರ್ 2 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Walk In Interview In Chitaguppi Hospital On May 15

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಹಾಗೂ ಹೆಚ್ವಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836 2213825 ಕರೆ ಮಾಡಬಹುದುದ ಅಥವಾ ಇ-ಮೇಲ್ [email protected] ಗೆ ಸಂಪರ್ಕಿಸಬಹುದು.

ಗೌರವಧನದ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚಿಟಗುಪ್ಪಿ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+