ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ಕನ್ನಡದಲ್ಲಿ 97 ಹುದ್ದೆ ಭರ್ತಿ; ಅ.29ಕ್ಕೆ ನೇರ ಸಂದರ್ಶನ

|
Google Oneindia Kannada News

ಮಂಗಳೂರು, ಅಕ್ಟೋಬರ್ 27 : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 97 ಹುದ್ದೆಗಳ ಭರ್ತಿಗಾಗಿ ಅಕ್ಟೋಬರ್ 29ರಂದು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ.

ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣದ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.

ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

ಈ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು 97 ಹುದ್ದೆಗಳಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ವೇತನ ನಿಗದಿ ಮಾಡಲಾಗಿದೆ.

ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ ಕೋಲಾರ; ಖಾಸಗಿ ಕಂಪನಿಗಳಲ್ಲಿ 5000 ನೇಮಕಾತಿ

Walk In Interview In Dakshina Kannada Female Health Assistant post

ಪಿಯುಸಿ ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಪ್ರಮಾಣ ಪತ್ರ ಮತ್ತು ನರ್ಸಿಂಗ್ ಕೌನ್ಸಿಲ್ ಬೋರ್ಡ್‌ನಿಂದ ಪ್ರಡೆದ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

ನೇರ ಸಂದರ್ಶನದ ಸಮಯದಲ್ಲಿ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಅಂಕಪಟ್ಟಿಗಳ ಮೂಲ ಮತ್ತು ಸ್ವಯಂ ದೃಢೀಕರಿಸಿದ ನಕಲು ಪ್ರತಿಯನ್ನು ನೀಡಬೇಕು. ಅನುಭವವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

Recommended Video

ಭಾರತ ಸೇನೆಯ ಹೊಸ SECRET !! | Oneindia Kannada

ಈಗಾಗಲೇ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ನೇರ ಸಂದರ್ಶನ ನಡೆಯುವ ಸ್ಥಳ : ಅಕ್ಟೋಬರ್ 29ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಯಲಿದೆ. ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಆವರಣ, ದಕ್ಷಿಣ ಕನ್ನಡ, ಮಂಗಳೂರು.

English summary
Dakshina Kannada health and family welfare department organized walk-in-interview for 97 Jr. Female Health Assistant post. Candidates can attend interview on October 29, 2020
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X