ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ದಾವಣಗೆರೆ, ಜುಲೈ 24 : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದಾವಣಗೆರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 30 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಶುಶ್ರೂಷಕರು, ಪ್ರಯೋಗ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ನೇರ ಸಂದರ್ಶನದ ಮುಖಾಂತರ ಮೆರಿಟ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಕೊಡಗು ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗೆ ಅರ್ಜಿ ಹಾಕಿ ಕೊಡಗು ಜಿಲ್ಲೆಯಲ್ಲಿ 120 ವೈದ್ಯರ ಹುದ್ದೆಗೆ ಅರ್ಜಿ ಹಾಕಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇವರ ಅಧೀನದಲ್ಲಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮೂಲಕ ಹುದ್ದೆಗಳು ಭರ್ತಿಯಾಗುವವರೆಗೆ ಕಾರ್ಯ ನಿರ್ವಹಣೆ ಮಾಡಬೇಕು.

ಎನ್‌ಸಿಎಲ್ ನೇಮಕಾತಿ; 512 ಹುದ್ದೆಗಳು ಖಾಲಿ ಇವೆ ಎನ್‌ಸಿಎಲ್ ನೇಮಕಾತಿ; 512 ಹುದ್ದೆಗಳು ಖಾಲಿ ಇವೆ

Walk In Interview In Davanagere On July 30

ನೇರ ಸಂದರ್ಶನ ನಡೆಯುವ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎಸ್.ಎಸ್ ಹೈಟೆಕ್ ಆಸ್ಪತ್ರೆ ಹತ್ತಿರ ರಾಮನಗರ ರಸ್ತೆ ಎನ್. ಸಿ. ಸಿ ಕ್ಯಾಂಪ್ ಹತ್ತಿರ ದಾವಣಗೆರೆ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಕೆ-ರೈಡ್ ಸಂಸ್ಥೆಯುಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೆ-ರೈಡ್ ಸಂಸ್ಥೆಯುಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಜುಲೈ 28ರೊಳಗಾಗಿ ಅವಶ್ಯಕ ದಾಖಲಾತಿ, ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಜುಲೈ 30ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

English summary
Walk in interview in Davanagere on July 30, 2020 for the post of nurse, lab technician and pharmacist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X