• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಾವಣಗೆರೆ; ವಿವಿಧ ಹುದ್ದೆಗೆ ಮೇ 17ರಂದು ನೇರ ಸಂದರ್ಶನ

|

ದಾವಣಗೆರೆ, ಮೇ 14; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಮೇ17ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಮೇ 17ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ. ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಸೆಪ್ಟೆಂಬರ್ 30ರವರೆಗೆ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲಾಗುತ್ತದೆ.

ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶುಶ್ರೂಷಕರು (1) ಹುದ್ದೆ ಖಾಲಿ ಇದ್ದು ತಿಂಗಳಿಗೆ 25 ಸಾವಿರ ರೂ. ವೇತನವಿದೆ. ಪ್ರಯೋಗಶಾಲಾ ತಂತ್ರಜ್ಞರ (2) ಹುದ್ದೆ ಖಾಲಿ ಇದ್ದು ಮಾಸಿಕ ವೇತನ 20 ಸಾವಿರ ರೂ. ಹಾಗೂ ಫಾರ್ಮಸಿಸ್ಟ್ (16) ಹುದ್ದೆಗಳಿದ್ದು, ಮಾಸಿಕ ವೇತನ 20 ಸಾವಿರ ರೂ. ನಿಗದಿ ಮಾಡಲಾಗಿದೆ.

ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಬೆಳೆ ವಿಮಾ ಯೋಜನೆಯಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ ಶಿವಮೊಗ್ಗ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

ನೇಮಕವಾಗುವ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸುವುದಿಲ್ಲ. ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವುದು.

ಶುಶ್ರೂಷಕರು ಇಲಾಖೆಯು ನಿಗದಿಪಡಿಸಿರುವ ವಿದ್ಯಾರ್ಹತೆ (ಬಿಎಸ್‍ಸಿ/ಜಿಎನ್‍ಎಂ ನರ್ಸಿಂಗ್) ಹೊಂದಿರಬೇಕು ಹಾಗೂ ಕರ್ನಾಟಕದಲ್ಲಿನ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿಯಾಗಿರಬೇಕು.

English summary
Davanagere district health and family welfare department organized walk in interview on May 17 for various post. Candidates can attend from morning 11 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X