ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ನವೆಂಬರ್ 08 : ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ನವೆಂಬರ್ 14ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಅಸೋಸಿಯೇಟ್, ರಿಸರ್ಚ್ ಫೆಲೋ, ಪ್ರೋಗ್ರಾಮರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ಗುತ್ತಿಗೆ ಆಧಾರದ ಮೇಲೆ ನಡೆಯಲಿದೆ. ಸಾಂಸ್ಥಿಕ ಅಭಿವೃದ್ಧಿ ಯೋಜನೆಯಡಿ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಜೊತೆ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿದ್ಯಾರ್ಹತೆ, ವೇತನದ ವಿವರಗಳನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

Walk In Interview In Dharwad Agricultural University

ನೇರ ಸಂದರ್ಶನಕ್ಕೂ ಮೊದಲು ಅರ್ಜಿ, ದಾಖಲೆಗಳನ್ನು ವಿಶ್ವವಿದ್ಯಾಲಯಕ್ಕೆ ಕಳಿಸಿಕೊಡುವ ಅಗತ್ಯವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ನೋಡುವಂತೆ ಮನವಿ ಮಾಡಲಾಗಿದೆ.

ನೇರ ಸಂದರ್ಶನ ನಡೆಯುವ ವಿಳಾಸ: ಸಹ ಸಂಶೋಧನಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ. ನವೆಂಬರ್ 14, 2019. ಬೆಳಗ್ಗೆ 10 ಗಂಟೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+