ಧಾರವಾಡ; ಜೂನ್ 1ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ

ಧಾರವಾಡ, ಮೇ 29 : ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಜೂನ್ 1ರಂದು ಈ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಯಲಿದೆ.

Recommended Video

      ನೀವು ಸೈಲೆಂಟ್ ಆಗಿಲ್ಲ ಅಂದ್ರೆ, ನಾನು ವೈಲೆಂಟ್ ಆಗಬೇಕಾಗುತ್ತದೆ | Ravi d channannavar | Oneindia Kannada

      ಕೊರೊನಾ ವೈರಸ್ ಪ್ರಕರಣಗಳ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

      ಮೂರು ತಿಂಗಳ ಮಟ್ಟಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೂನ್ 1ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ನಡೆಯುತ್ತಿದೆ.

       Walk In Interview In Dharwad On June 1

      ಆಸಕ್ತ ವೈದ್ಯರು ಹಾಗೂ ಅರೆ ವೈದ್ಯಕೀಯ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. ನೇಮಕಾತಿಯನ್ನು ವಿದ್ಯಾರ್ಹತೆಯ ಗರಿಷ್ಟ ಅಂಕಗಳ ಅನ್ವಯ ಹಾಗೂ ಅನುಭದ ಆಧಾರದ ಮೇಲೆ ಮಾಡಲಾಗುತ್ತದೆ.

      ನೇಮಕಾತಿ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ಮೂಲ ಅಂಕಪಟ್ಟಿ, ಅನುಭವದ ಪ್ರಮಾಣಪತ್ರ ಇತರ ಮೂಲ ದಾಖಲಾತಿಗಳನ್ನು ತರಬೇಕು.

      ಎಲ್ಲಾ ದಾಖಲೆಗಳ ಎರಡು ಪ್ರತಿ ಝೆರಾಕ್ಸ್‌ಗಳನ್ನು ಸ್ವಯಂ ದೃಢಿಕೃತ ಎರಡು ಭಾವಚಿತ್ರಗಳೊಂದಿಗೆ ತರಬೇಕು ಎಂದು ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 0836-2447483 ಸಂಖ್ಯೆಗೆ ಕರೆ ಮಾಡಬಹುದು.

      ನೇರ ಸಂದರ್ಶನ ನಡೆಯುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+