ಹಾಸನದಲ್ಲಿ ಅ.24ರಂದು ವಾಕ್ ಇನ್ ಇಂಟರ್‌ ವ್ಯೂ

ಬೆಂಗಳೂರು, ಅಕ್ಟೋಬರ್ 22 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ವಿವಿಧ ಕಂಪನಿಗಳು ಅಕ್ಟೋಬರ್ 24ರಂದು ನೇರ ಸಂದರ್ಶನವನ್ನು ನಡೆಸಲಿವೆ. ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಹಾಸನದ ಹೆಸರಾಂತ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 24 ರಂದು ಬೆಳಗ್ಗೆ 10 ಗಂಟೆಯಿಂದ ನೇರ ಸಂದರ್ಶನ ನಡೆಸಲಿವೆ. 18 ರಿಂದ 30 ವರ್ಷದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಐಟಿಐ ಮತ್ತು ಡಿಪ್ಲೊಮೋದಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ. ನೇರ ಸಂದರ್ಶನಕ್ಕೆ ಬರುವವರು ಮೂಲ ದಾಖಲಾತಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್ ಪ್ರತಿ ತರಬೇಕು.

Walk In Interview In Hassan On October 24

ನೇರ ಸಂದರ್ಶನ ಹಾಸನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಸಂಪರ್ಕಿಸಬಹುದಾಗಿದೆ.

ಪೊಲೀಸ್ ನೇಮಕಾತಿ : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 6/11/2019 ಕೊನೆಯ ದಿನವಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ 205, ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 63, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಸೇವೆಯಲ್ಲಿರುವವರು 32 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+