• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿ; ಮಾರ್ಚ್ 30ರಂದು ನೇರ ಸಂದರ್ಶನ

|
Google Oneindia Kannada News

ಹಾವೇರಿ, ಮಾರ್ಚ್ 28; ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷ ವಯೋಮಿತಿಯವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಮಾರ್ಚ್ 30ರ ಬುಧವಾರ ಬೆಳಗ್ಗೆ 10.30ಕ್ಕೆ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಯುವಕ/ ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ KPSC ಮೂಲಕ ಶೀಘ್ರವೇ ಕಾರ್ಮಿಕ ಇಲಾಖೆ ನೇಮಕಾತಿ

ವಿವಿಧ ಖಾಸಗಿ ಸಂಸ್ಥೆಗಳು ತಮ್ಮಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸ್, ಐಟಿಐ (ಯಾವುದೇ ಟ್ರೇಡ್), ಡಿಪ್ಲೊಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹೊಂದಿದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು.

KPSC Recruitment; ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ KPSC Recruitment; ಸದನದಲ್ಲಿ ಮುಖ್ಯಮಂತ್ರಿಗಳ ಉತ್ತರ

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು 18 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು 3 ಕಾಪಿ ರೆಸ್ಯೂಮ್, ಆಧಾರ ಕಾರ್ಡ್‌ ಜೆರಾಕ್ಸ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.

KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ KPSC Recruitment; 410 ಹುದ್ದೆಗಳಿಗೆ ಅರ್ಜಿ ಹಾಕಿ

ಸಂದರ್ಶನದ ದಿನದಂದು ಹೆಸರು ನೋಂದಣಿ ಮಾಡಿಕೊಂಡು ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-24921, ಮೊಬೈಲ್ 866030991

ನೇರ ಸಂದರ್ಶನ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೊಠಡಿ ಸಂಖ್ಯೆ 10, 3ನೇ ಮಹಡಿ, 'ಎ' ಬ್ಲಾಕ್, ಜಿಲ್ಲಾಡಳಿತ ಭವನ, ದೇವಗಿರಿ ರಸ್ತೆ, ಹಾವೇರಿ.

ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಡಿಕೇರಿಯಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಜಿ ಸಲ್ಲಿಸಲು ಏಪ್ರಿಲ್ 23 ಕೊನೆಯ ದಿನ.

ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 6 ಸಾವಿರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನ ರೂ. 6 ಸಾವಿರ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಈ ಎರಡು ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ವಿಕಲಚೇತನತೆ ಪ್ರಮಾಣ ಶೇ 40ಕ್ಕಿಂತ ಮೇಲ್ಪಟ್ಟು ಶೇ 75ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.

ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ ನಗರಸಭೆ ಮಡಿಕೇರಿ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಖಾಲಿ ಇದೆ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ, ಚೆಂಬು, ಕುಂಜಿಲ, ಕೊಣಂಜಗೇರಿ ಸೋಮವಾರಪೇಟೆ ತಾಲ್ಲೂಕಿನ ಬೇಳೂರು, ಚೆಟ್ಟಳ್ಳಿ, ದುಂಡಳ್ಳಿ, ಹಂಡ್ಲಿ, ನೇರುಗಳಲೆ, ಆಲೂರು ಸಿದ್ದಾಪುರ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಬಿರುನಾಣಿ, ದೇವರಪುರ, ಗೋಣಿಕೊಪ್ಪ, ಹಾಲುಗುಂದ, ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕದನೂರು, ಕೆ.ಬಾಡಗ, ಕಿರುಗೂರು, ಪಾಲಿಬೆಟ್ಟ, ತಿತಿಮತಿ, ಶ್ರೀಮಂಗಲದಲ್ಲಿ ಖಾಲಿ ಇದೆ.

ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲ್ಲೂಕಿನ ಎಂಆರ್‌ಡಬ್ಲ್ಯುಗಳಿಂದ ಉಚಿತವಾಗಿ ಪಡೆದು ಏಪ್ರಿಲ್ 23 ರೊಳಗೆ ಭರ್ತಿ ಮಾಡಿ ಅರ್ಜಿಗಳನ್ನು ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಉಚಿತ ತರಬೇತಿಗೆ ಹೆಸರು ನೋಂದಾಯಿಸಿ; ಟಿ. ಇ. ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ 6-8ನೇ ತರಗತಿ ಪದವೀಧರ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಸಹಯೋಗದೊಂದಿಗೆ ಏಪ್ರಿಲ್ 1 ರಿಂದ 42 ದಿನಗಳ ಕಾಲ ಉಚಿತ ತರಬೇತಿ ನೀಡಲಾಗುತ್ತದೆ.

ಕಲಬುರಗಿ ಜಿಲ್ಲೆಯ 8 ತಾಲೂಕುಗಳ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ಉಚಿತವಾಗಿ ಸಿ.ಇ.ಟಿ. ತರಬೇತಿಯನ್ನು ನೀಡಲಾಗುತ್ತಿದೆ. ಎಲ್ಲಾ ಅರ್ಹ ಅಭ್ಯರ್ಥಿಗಳು ತಮ್ಮ ಟಿ.ಇ.ಟಿ ತೇರ್ಗಡೆ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ 2022ರ ಮಾರ್ಚ್ 27ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿ ಮಾಡಿಕೊಂಡ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಜಿಲ್ಲೆಯ ಸಂಬಂಧಪಟ್ಟ ಆಯಾ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಯುವ ಸಿ.ಇ.ಟಿ. ತರಬೇತಿಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಮಲಾಪುರ (ಡಯಟ್) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರುಗಳಾದ 9448552283, ಗುರುಶಾಂತಯ್ಯ ಹೀರೆಮಠ 9611301011ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

English summary
Haveri district employment exchange office organized walk in interview in Haveri on March 30th. 18 to 35 year old candidates can attend walk in interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X