ಕಲಬುರಗಿ; ಏಪ್ರಿಲ್ 12ರಂದು ನೇರ ಸಂದರ್ಶನ

ಕಲಬುರಗಿ, ಏಪ್ರಿಲ್ 11; ಕಲಬುರಗಿ ನಗರದಲ್ಲಿ ಏಪ್ರಿಲ್ 12ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಮನವಿ ಮಾಡಿದ್ದಾರೆ.

ಎಂ. ಎಸ್. ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 12 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.

ಪ್ರತಿಷ್ಠಿತ ಫ್ಲಿಪ್‍ಕಾರ್ಟ್ ಕಂಪನಿಯು ಈ ನೇರ ಸಂದರ್ಶನ ನಡೆಸುತ್ತಿದ್ದು, ಈ ಕಂಪನಿಯು ಶಾಶ್ವತವಾಗಿ ಮನೆಯಿಂದ ಕೆಲಸ ಮಾಡುವ ಅವಕಾಶವನ್ನು ಕೊಡುತ್ತಿದೆ. ವಿದ್ಯಾರ್ಹತೆ ಪಿ.ಯು.ಸಿ ಅಥವಾ ಪದವೀಧರರು.

Walk In Interview In Kalaburagi On April 12th

ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಲ್ಯಾಪ್‍ ಟಾಪ್ (ಇಂಟರ್‌ನೆಟ್) ಹೊಂದಿರುವ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ವೇತನ ಮಾಸಿಕ 15,000 ರೂ. ನಿಂದ 18,000 ರೂ. ತನಕ ಇರುತ್ತದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಪ್ಪಳ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನವಾಗಿದೆ. ಚಲನ್ ಮೂಲಕ ಶುಲ್ಕ ಪಾವತಿಸಲು ಏಪ್ರಿಲ್ 22 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಶುಲ್ಕ, ವಯೋಮಿತಿ, ನೇಮಕಾತಿ ವಿಧಾನ ಮತ್ತು ನಿಯಮಗಳು ಮುಂತಾದ ವಿವರಗಳಿಗಾಗಿ ವೆಬ್ ಸೈಟ್ ನೋಡಬಹುದಾಗಿದೆ.

https://districts.ecourts.gov.in/koppal/online-recruitment ಅಥವಾ https://karnatakajudiciary.kar.nic.in/districtrecruitment ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ತರಬೇತಿಗೆ ಅರ್ಜಿ ಆಹ್ವಾನ; ಕಲಬುರಗಿಯ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಇದೇ ಏಪ್ರಿಲ್ 18 ರಿಂದ 27ರವರೆಗೆ ಉಚಿತವಾಗಿ 10 ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕಾ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

ಅರ್ಜಿಗಳನ್ನು 2022ರ ಏಪ್ರಿಲ್ 16 ರೊಳಗಾಗಿ ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಇದೇ ಏಪ್ರಿಲ್ 16 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705.

ಆಕ್ಷೇಪಣೆಗೆ ಆಹ್ವಾನ; ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿ ವಿವಿಧ ಕಾರಣಗಳಿಂದ ಖಾಲಿಯಾದ 2 ಅಂಗನವಾಡಿ ಕಾರ್ಯಕರ್ತೆ ಮತ್ತು 3 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾಡಳಿತದ ವೆಬ್‌ಸೈಟ್ www.koppal.nic.in ನಲ್ಲಿ, ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ನಗರಸಭೆ, ಪಟ್ಟಣ ಪಂಚಾಯತಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಾರ್ಯಾಲಯ, ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ, ಖಾಲಿ ಇರುವ ಅಂಗನವಾಡಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 19 ರೊಳಗಾಗಿ ಕನಕಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕು. ಅವಧಿ ಮುಗಿದ ನಂತರ ಸ್ವೀಕೃತವಾದ ಯಾವುದೇ ಆಕ್ಷೇಪಣಾ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+