• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿ; ಡಿಸೆಂಬರ್ 31ರಂದು ನೇರ ಸಂದರ್ಶನ

|

ಕಲಬುರಗಿ, ಡಿಸೆಂಬರ್ 28; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಡಿಸೆಂಬರ್ 31ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ. ನಿರುದ್ಯೋಗಿ ಯುವಕ/ ಯುವತಿಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು.

ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಭಾರತೀಯ ಸೇನೆ ನೇಮಕಾತಿ: ಬೆಳಗಾವಿ ವಲಯದಿಂದ ಅರ್ಜಿ ಆಹ್ವಾನ

ಕಲಬುರಗಿಯ ಸ್ವತಂತ್ರ ಮೈಕ್ರೋಫೈನಾನ್ಸ್‌ನಲ್ಲಿ ಫಿಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಯೋಮಿತಿ 20 ರಿಂದ 26 ವರ್ಷದೊಳಗಿರಬೇಕು.

KSHDCL ನೇಮಕಾತಿ; ಜನವರಿ 20ರ ತನಕ ಅರ್ಜಿ ಹಾಕಿ

ಬೆಂಗಳೂರಿನ ಕ್ವೆಸ್ ಕಾರ್ಪ್ ಲಿಮಿಟೆಡ್‌ನಲ್ಲಿ ಸೆಲ್ಸ್ ಪ್ರಮೋಟರ್, ಪ್ರೊಡಕ್ಷನ್ ಇಂಜಿನಿಯರ್, ಕ್ವಾಲಿಟಿ ಇಂಜಿನಿಯರ್, ಸೇಲ್ಸ್ ಡೆಮೋಸ್ಟ್ರೆಟರ್, ಟೆಲಿ ಕಾಲರ್, ಸಿ.ಆರ್.ಓ. ಹಾಗೂ ಇತರೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷ.

ಅಂಚೆ ಇಲಾಖೆ ಕರ್ನಾಟಕ ವೃತ ನೇಮಕಾತಿ; 2443 ಹುದ್ದೆಗಳು

ಬೆಂಗಳೂರಿನ ಎನ್.ಟಿ.ಟಿ.ಎಫ್.ದಲ್ಲಿ ಓಜೆಟಿ ಹುದ್ದೆಗೆ ಐಟಿಐ (ಫಿಟ್ಟರ್, ಟರ್ನರ್, ಮಶಿನಿಸ್ಟ್), ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08472-274846.

English summary
Kalaburagi district employment exchange office organized walk in interview on December 31, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X