ಕಲಬುರಗಿ; 12 ಹುದ್ದೆಗಳಿಗೆ ಗುರುವಾರ ನೇರ ಸಂದರ್ಶನ

ಕಲಬುರಗಿ, ಜನವರಿ 12; ಕಲಬುರಗಿ ಜಿಲ್ಲೆಯ ಅಫಜಲಪೂರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ ಹಾಗೂ ಸೇಡಂ ತಾಲೂಕುಗಳಲ್ಲಿನ ಪ್ರತಿ ಆಸ್ಪತ್ರೆಗೆ ಇಬ್ಬರಂತೆ ಒಟ್ಟು 12 ಮೆಡಿಕಲ್ ಆಕ್ಸಿಜನ್ ಸಿಸ್ಟಮ್ ಟೆಕ್ನಿಶಿಯನ್ಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನಿಯಮಾನುಸಾರ ಮೆರಿಟ-ಕಂ-ರೊಸ್ಟರ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 13 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. ನೇಮಕಗೊಂಡ ಅಭ್ಯರ್ಥಿಗಳು (ಎಲ್‍ಎಮ್‍ಓ ಟ್ಯಾಂಕ್ಸ್, ಪಿಎಸ್‍ಎ ಪ್ಲಾಂಟ್ಸ್, ಆಕ್ಸಿಜನ್ ಸಿಲಿಂಡರ್ಸ್, ಆಕ್ಸಿಜನ್ ಮ್ಯಾನಿಫೋಲ್ಡ್ ಆಂಡ್ ಮೆಡಿಕಲ್ ಗ್ಯಾಸ್ ಪೈಪ್‍ಲೈನ್ ಸಿಸ್ಟಮ್ ಮತ್ತಿತರ) ನಿರ್ವಹಣೆ ಮಾಡಬೇಕು.

Walk In Interview In Kalaburagi On January 13

ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಡಿಪ್ಲೋಮಾ/ ಐಟಿಐ ಗಳಲ್ಲಿ ಬಯೋ-ಮೆಡಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಇನ್‍ಸ್ಟ್ರುಮೆಂಟೇಶನ್, ಮೆಕ್ಯಾನಿಕಲ್, ಇನ್‍ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಂಟೆನೆನ್ಸ್ ಮೆಕ್ಯಾನಿಕ್‍ದಲ್ಲಿ ಉತ್ತೀರ್ಣರಾಗಿರಬೇಕು. ಆಸ್ಪತ್ರೆಗಳಲ್ಲಿ 2 ವರ್ಷಗಳ ಅನುಭವ ಅಥವಾ ವೈದ್ಯಕೀಯ ಸಲಕರಣೆಗಳು ಮತ್ತು ವೈದ್ಯಕೀಯ ಆಮ್ಲಜನಕ ಆಕ್ಸಿಜನ್ ಪ್ಲಾಂಟ್‍ಗಳಲ್ಲಿ ಸೇವೆ ಸಲ್ಲಿಸಿದ ಕುರಿತು ಅನುಭವ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 42 ವರ್ಷ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000 ರೂ. ಗಳ ವೇತನ ನೀಡಲಾಗುತ್ತದೆ. ಆಸಕ್ತರು ತಮ್ಮ ಮೂಲ ಅಂಕಪಟ್ಟಿಗಳು ಮತ್ತು ಇತರೆ ಪ್ರಮಾಣ ಪತ್ರಗಳ ಒಂದು ಸೆಟ್ ಝೆರಾಕ್ಸ್ ಪ್ರತಿ ಹಾಗೂ ಪಾಸ್‍ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಈ ಹುದ್ದೆಗಳ ನೇಮಕಾತಿ ತಾತ್ಕಾಲಿಕವಾಗಿದ್ದು, ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಡಿಪ್ಲೋಮಾ ಹಾಗೂ ಐಟಿಐ ತರಬೇತಿಗಳಲ್ಲಿಗಳಿಸಿದ ಒಟ್ಟು ಶೇಕಡಾವಾರು ಅಂಕಗಳನ್ನು ಹಾಗೂ ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.

ಕಲಬುರಗಿ ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳಿಗೆ ಹಾಗೂ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-278618ಗೆ ಕರೆ ಮಾಡಬಹುದಾಗಿದೆ.

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಹಾಕಿ; ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಗೌರವಧನದ ಆಧಾರದ ಮೇಲೆ ಒಂದು ವರ್ಷದ ಅವಧಿಗೆ 2 ಜನ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.

ಆಳಂದ ಪುರಸಭೆಯಲ್ಲಿ ನೋಂದಾಯಿತ ಅರ್ಹ ಸ್ವ-ಸಹಾಯ ಹಾಗೂ ಒಕ್ಕೂಟ ಸಂಘಗಳ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷಗಳು. ಅರ್ಜಿಯ ಜೊತೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಲಗತ್ತಿಸಬೇಕು.

ಈ ಹುದ್ದೆಗೆ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. ಈ ಕುರಿತು ಪ್ರಮಾಣ ಪತ್ರ ಪಡೆದಿರಬೇಕು. ಪುರಸಭೆ ಅಫಜಲಪೂರ ವ್ಯಾಪ್ತಿಯಲ್ಲಿ ಖಾಯಂ ನಿವಾಸಿಯಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 8000 ರೂ. ಮತ್ತು ಪ್ರಯಾಣ ಭತ್ಯೆ ರೂ. 2000ರವರೆಗೆ ನೀಡಲಾಗುತ್ತದೆ.

ಆಸಕ್ತಿಯುಳ್ಳ ಮಹಿಳಾ ಅಭ್ಯಥಿಗಳು ಆಳಂದ ಪುರಸಭೆ ಕಚೇರಿಯ ಸಮುದಾಯ ಸಂಘಟನಾ ಅಧಿಕಾರಿಯನ್ನು ಸಂಪರ್ಕಿಸಿ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 24ರ ಸಂಜೆ 5.30ರೊಳಗೆ ಆಳಂದ ಪುರಸಭೆಯ ಕಚೇರಿಯಲ್ಲಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+