ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ; ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 10ರಂದು ನೇರ ಸಂದರ್ಶನ

|
Google Oneindia Kannada News

ಕಲಬುರಗಿ, ಜೂನ್ 08; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 10 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.

ಬಳ್ಳಾರಿ; ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಬಳ್ಳಾರಿ; ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕರಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕಲಬುರಗಿಯ ಪ್ರತಿಷ್ಠಿತ ಫೀನಕೆರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ ಈ ನೇರ ಸಂದರ್ಶನ ಆಯೋಜನೆ ಮಾಡಿದೆ.

ಕಲಬುರಗಿ; ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಕಲಬುರಗಿ; ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

jobs

ಆಫೀಸರ್ ಹುದ್ದೆಗೆ ನೇಮಕಾತಿ ನಡೆಯುತ್ತಿದ್ದು, ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷಗಳು. ನೇರ ಸಂದರ್ಶನಕ್ಕೆ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ.

ಐಡಿಬಿಐ ಬ್ಯಾಂಕ್‌ನಲ್ಲಿ 1044 ಹುದ್ದೆಗೆ ಅರ್ಜಿ ಆಹ್ವಾನ ಐಡಿಬಿಐ ಬ್ಯಾಂಕ್‌ನಲ್ಲಿ 1044 ಹುದ್ದೆಗೆ ಅರ್ಜಿ ಆಹ್ವಾನ

ನೇರ ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳು ಬೈಕ್ ಹಾಗೂ ಲೈಸನ್ಸ್ ಹೊಂದಿರಬೇಕು. ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಸಂದರ್ಶಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ಕರೆಗಳನ್ನು ಮಾಡಲು ದೂರವಾಣಿ ಸಂಖ್ಯೆಗಳು 08472-274846.

ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ; ಯುವ ಸ್ಪಂದನ ಕಾರ್ಯಕ್ರಮದ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಯುವತಿ/ ಯುವಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಂಡಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವಜನ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಟಾನ ಯೋಜನೆಯ ಅಡಿಯಲ್ಲಿ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಯಾವುದೇ ಪದವಿ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರಬೇಕು. ಯುವಕರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ವಯೋಮಿತಿ 21 ರಿಂದ 35 ವರ್ಷಗಳು. ನ್ಯಾಮತಿ ತಾಲೂಕಿನಲ್ಲಿ ವಾಸಿಸುತ್ತಿರುವ ಖಾಯಂ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ತಮ್ಮ ಭಾವಚಿತ್ರದ ಸ್ವ-ವಿವರೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ವಿಳಾಸಕ್ಕೆ ಜೂನ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 8970490756/ 9380823091/ 08192-222059 ಅನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ; ಬಳ್ಳಾರಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿಗಳ ಪ್ರಕಟಣೆ ಹೇಳಿದೆ.

ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಆಸಕ್ತಿಯುಳ್ಳ ಅರ್ಜಿದಾರರು ಕಚೇರಿ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆಗೆ ಜೂನ್ 18 ಕೊನೆಯ ದಿನ

1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 8 ಸಾವಿರ ರೂ.ಗಳು. ಸಾರಿಗೆ ಭತ್ಯೆ 2 ಸಾವಿರ (ಅಗತ್ಯತೆಗೆ ತಕ್ಕಂತೆ ಗರಿಷ್ಟ) ನೀಡಲಾಗುತ್ತದೆ.
ಅಭ್ಯರ್ಥಿಗೆ ವಯೋಮಿತಿ 18 ರಿಂದ 45 ವರ್ಷ.

ಅರ್ಜಿ ಸಲ್ಲಿಸುವವರು ಕನಿಷ್ಠ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರತಕ್ಕದ್ದು), ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು, ಕನಿಷ್ಠ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯೆಯಾಗಿರಬೇಕು.

ಆಂತರಿಕ ಸಾಲ ಪಡೆದು ಕಟ್ಟು ಬಾಕಿದಾರರಾಗಿರಬಾರದು, ಸರ್ಕಾರಿ/ ಅರೇ ಸರ್ಕಾರಿ/ ಎನ್‌ಜಿಓಗಳಲ್ಲಿ ಉದ್ಯೋಗಸ್ಥರಾಗಿರಬಾರದು, ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರತಕ್ಕದ್ದು,

ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಜಿಲ್ಲೆಗಳಲ್ಲಿ/ ಹೊರ ರಾಜ್ಯಗಳಲ್ಲಿ ನೀಡುವ ತರಬೇತಿ ಅಥವಾ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕುರುಗೋಡು ಪುರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಗೆ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 08393-263166.

English summary
Kalaburagi district employment exchange office organized walk in interview on June 10th. 18 to 35 year age group can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X