ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ; ಜೂನ್ 16ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

|
Google Oneindia Kannada News

ಕಲಬುರಗಿ, ಜೂನ್ 16; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 18ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ. 20 ರಿಂದ 45 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಕಲಬುರಗಿಯ ಎನ್‍ಷಿಯೆಂಟ್ ಇನ್ಫೋಟೆಕ್ ಸಲ್ಯೂಷನ್ಸ್‌ ಈ ಸಂದರ್ಶನ ನಡೆಸುತ್ತಿದ್ದಾರೆ. ಫೀಲ್ಡ್ ಸೇಲ್ಸ್ ಎಕ್ಸಿಕ್ಯೂಟಿವ್, ಫೀಲ್ಡ್ ಸೇಲ್ಸ್ ಆಫೀಸರ್, ಡೆಲಿವರಿ ಬಾಯ್ ತಲಾ 20 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ ಚಿಕ್ಕಮಗಳೂರಿನಲ್ಲಿ ಕೆಲಸ ಖಾಲಿ ಇದೆ; ಜೂನ್ 24ರೊಳಗೆ ಅರ್ಜಿ ಹಾಕಿ

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಅಥವಾ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಡೆಲಿವರಿ ಬಾಯ್ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ, ಪಿಯುಸಿ. ವಿದ್ಯಾರ್ಹತೆ ಹೊಂದಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

Walk In Interview In Kalaburagi On June 18th

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ಆಧಾರ್ ಕಾರ್ಡ್‍ದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಬಹುದಾಗಿದೆ. ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಮನವಿ ಮಾಡಲಾಗಿದೆ.

ನೇರ ಸಂದರ್ಶನ ನಡೆಯುವ ವಿಳಾಸ; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಐಟಿಐ ಕಾಲೇಜು ಹಿಂಭಾಗ. ಜೂನ್ 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ತನಕ.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳನ್ನು ಗೌರವ ಸಂಭಾವನೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ.

ಸ್ಥಳೀಯ ಅಭ್ಯರ್ಥಿಗಳು, ಎಸ್ಎಸ್ಎಲ್‌ಸಿ ಪಾಸಾಗಿರುವ ನಿವಾಸಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳು ಶಿಕಾರಿಪುರ ತಾಲೂಕು ಚಿಕ್ಕಜಂಬೂರು ಮತ್ತು ಹೊಸೂರು, ಶಿವಮೊಗ್ಗ ತಾಲೂಕು ಅಬ್ಬಲಗೆರೆ, ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇವೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಗ್ರಾಮ ಪಂಚಾಯಿತಿ ಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ 14/07/2022 ರೊಳಗಾಗಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-222905.

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ತರಬೇತಿ; 2022-23ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಎಸ್ಎಸ್ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಆಂಗ್ಲ ಭಾಷೆಯನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರಬೇಕು.

ಗದಗ-ಬೆಟಗೇರಿ 22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ 17 ಅಭ್ಯರ್ಥಿಗಳು, ಆಂಧ್ರ ಪ್ರದೇಶದ ನಲ್ಲೂರು ಜಿಲ್ಲೆಯ ಎಸ್‌ಪಿಕೆಎಂ 3 ಅಭ್ಯರ್ಥಿಗಳು ಹಾಗೂ ಕೇರಳದ ಕಣ್ಣೂರು 2 ಅಭ್ಯರ್ಥಿಗಳಿಗೆ ಅವಕಾಶವಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಯ್ಕೆಯಾದ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ರೂ. 2,500 ಶಿಷ್ಯವೇತನ ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿನಿಲಯದ ವ್ಯವಸ್ಥೆಯನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುತ್ತದೆ.

ಆಸಕ್ತರು ನಿಗದಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ 080-23561628/ 23566082/ 23568223 ಸಂಖ್ಯೆಗಳಿಗೆ ಕರೆ ಮಾಡಬಹುದು.

ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ್ (08372-297221) ಅಥವಾ ಆಯಾ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಶಿವಮೊಗ್ಗ (08182-223405) ಇವರನ್ನು ಸಂಪರ್ಕಿಸುವುದು.

Recommended Video

ಕತ್ತೆ ಹಾಲಿನಿಂದ 17 ಲಕ್ಷಕ್ಕೂ ಅಧಿಕ ದುಡಿಮೆ: ಮಂಗಳೂರಿನ ಈ ವ್ಯಕ್ತಿಯ ಯಶೋಗಾಥೆ | Oneindia Kannada

ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು 20/06/2022 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಪ್ರಾಂಶುಪಾಲರು, ಕ.ಕೈ.ತಂ.ಸಂ. ನರಸಾಪುರ, ಗದಗ-582102 ಇವರಿಗೆ ಸಲ್ಲಿಸಬೇಕು.

English summary
Kalaburagi district employment exchange office organized walk in interview on June 18th 2022. 20 to 45 age group candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X